ಬುಧವಾರ, ಫೆಬ್ರವರಿ 19, 2020
25 °C

ತಿಪ್ಪಸಂದ್ರ ಕೃಷಿ ಸಂಘಕ್ಕೆ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪ್ಪಸಂದ್ರ(ಮಾಗಡಿ): ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಿಮ್ಮೇಗೌಡ, ಉಪಾಧ್ಯಕ್ಷರಾಗಿ ಜಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಸನ್ನಕುಮಾರಿ ತಿಳಿಸಿದರು.

ನೂತನ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಸಹಕಾರ ಸಂಘಗಳು ಸರ್ವರ ಸಹಕಾರದಿಂದ ಮಾತ್ರ ಯಶಸ್ವಿಯಾಗಿವೆ. ಷೇರುದಾರರ ಸಹಕಾರದೊಂದಿಗೆ ಅಧಿಕಾರ ನಡೆಸಿಕೊಂಡು ಹೋಗಬೇಕಾಗಿದೆ. ರೈತರಿಗೆ ಅನುಕೂಲಕರವಾದ ಸವಲತ್ತು ನೀಡಲು ಶ್ರಮಿಸುವುದಾಗಿ ತಿಳಿಸಿದರು. 

ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಎಚ್‌.ಶಿವರಾಜು ಮಾತನಾಡಿ, ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಬಾಲಕೃಷ್ಣ ಅವರ ಸಲಹೆಯಂತೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಸಹಕಾರ ಸಂಘದ ನಿರ್ದೇಶಕರಾದ ಟಿ.ಜಿ.ವೆಂಕಟೇಶ್, ಟಿ.ಎಚ್‌.ಚಂದ್ರಶೇಖರ್‌, ಶಂಕರ್‌, ಜಯಮ್ಮ, ನರಸಮ್ಮ, ಟಿ.ವಿ.ವೆಂಕಟೇಶ್‌, ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಮುಖಂಡರಾದ ಶ್ರೀನಿವಾಸ್‌, ಗಂಗಣ್ಣ, ರಮೇಶ್‌, ರಂಗಸ್ವಾಮಯ್ಯ, ಮರಿಯಣ್ಣ, ರಾಜಣ್ಣ, ಶಿವಣ್ಣ, ಚಿಕ್ಕರಾಜು, ಜಯಣ್ಣ, ತಮ್ಮಯ್ಯ, ರಂಗಸ್ವಾಮಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)