ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಟ್ಟಸಂದ್ರ ಸಹಕಾರಿ ಸಂಘಕ್ಕೆ ಆಯ್ಕೆ

Last Updated 13 ಫೆಬ್ರುವರಿ 2020, 13:21 IST
ಅಕ್ಷರ ಗಾತ್ರ

ಹೊಸಕೋಟೆ: ನಂದಗುಡಿ ಹೋಬಳಿ ಇಟ್ಟಸಂದ್ರ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಾಸಕ ಶರತ್ ಬಚ್ಚೇಗೌಡರ ಬೆಂಬಲಿಗರು ಹಾಗೂ ಕಾಂಗ್ರೆಸ್ ಬೆಂಬಲಿಗರ ಮೈತ್ರಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಬೆಂಬಲಿಗರು ಯಾವುದೇ ಸ್ಥಾನದಲ್ಲಿ ಗೆಲುವು ಸಾಧಿಸಿಲ್ಲ.

ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಲ್ಲಿ ಕೆ.ನವೀನ್ ಕುಮಾರ್, ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಎಂ.ಆರ್. ಗೋಪಾಲ್, ಬಿ. ನಾರಾಯಣಪ್ಪ, ಬಿ.ಭೀಮಣ್ಣ, ವಿ. ಮುನಿನಂಜಪ್ಪ, ಟಿ.ವೆಂಕಟೇಶಪ್ಪ, ಗೆಲುವು ಸಾಧಿಸಿದ್ದಾರೆ.

ಹಿಂದುಳಿದ ವರ್ಗದ ಕ್ಷೇತ್ರದಲ್ಲಿ ನಾರಾಯಣಸ್ವಾಮಿ, ಇ.ಮುನಿಶಾಮಪ್ಪ ಗೆಲುವು ಪಡೆದಿದ್ದಾರೆ. ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರದಲ್ಲಿ ಮುನಿಯಪ್ಪ ರಾಳಕುಂಟೆ, ಮಹಿಳಾ ಮೀಸಲಾತಿಯಲ್ಲಿ ಅಕ್ಕಯ್ಯಮ್ಮ, ನಾಗಮಣಿ ಗೆದ್ದಿದ್ದಾರೆ. ಒಟ್ಟು 11 ಕ್ಷೇತ್ರಗಳಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಹಾಗೂ ಕಾಂಗ್ರೆಸ್ ನ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಗೆಲುವಿನ ವಿಷಯ ತಿಳಿದು ಮೈತ್ರಿಯ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಇಟ್ಟಸಂದ್ರ ಗೋಪಾಲ್, ಸಂಘದ ಮಾಜಿ ಅಧ್ಯಕ್ಷ ಸೀತೇಗೌಡ, ಗ್ರೀನ್ ವ್ಯಾಲಿ ಶಾಲೆಯ ಸಂಸ್ಥಾಪಕ ಐ.ಸಿ. ಮುನಿಶಾಮೇಗೌಡ, ಪ್ರಜಾ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಬಿ.ಗೋಪಾಲ್, ಗ್ರಾಮ ಪಂಚಾಯತಿ ಸದಸ್ಯ ರಮೇಶ್, ರಾಳಕುಂಟೆ ಎಂಪಿಸಿಎಸ್ ಅಧ್ಯಕ್ಷ ಮುನಿಶಾಮೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT