ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕೀನ್ಯಾದ ಮಹಿಳೆಯೊಬ್ಬಳು ದೆಹಲಿಗೆ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ 2.56 ಕೆ.ಜಿ ಕೊಕೇನ್ ಮಾದಕ ವಸ್ತುವನ್ನು ವೈಮಾನಿಕ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳ್ಳ ಸಾಗಣೆ ಮಾಡುತ್ತಿದ್ದ ಕೀನ್ಯಾದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.