ದೇವನಹಳ್ಳಿ: ಮಾದಕ ವಸ್ತು ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕರೊಬ್ಬರನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಒ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಮಹಿಳೆಯೊಬ್ಬರು ಕತಾರ್ನಿಂದ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು. ಖಚಿತ ಮಾಹಿತಿ ಮೇರೆಗೆ ಅವರನ್ನು ಡಿಆರ್ಒ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದಾರೆ. ಆಗ ಅವರ ಬಳಿ 3.2 ಕೆ.ಜಿಯಷ್ಟು ಸುಮಾರು ₹38.4 ಕೋಟಿ ಮೌಲ್ಯದ ಕೊಕೇನ್ ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವರ ವಿರುದ್ಧ ಮಾದಕ ವಸ್ತುಗಳ ನಿಯಂತ್ರಣ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.