ಶುಕ್ರವಾರ, ಫೆಬ್ರವರಿ 21, 2020
18 °C

ತೆಂಗಿನ ಸಸಿ, ವಿದ್ಯುತ್‌ ಕೇಬಲ್‌ ಕಳವು: ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ಜಮೀನಿನಲ್ಲಿ ನಾಟಿ ಮಾಡಿದ್ದ ತೆಂಗಿನ ಸಸಿ ಮತ್ತು ಪಂಪ್‌ಸೆಟ್‌ಗೆ ಹಾಕಿದ್ದ ಕೇಬಲ್‌ ವೈರ್ ಕಳವು ಮಾಡಿರುವ ಘಟನೆ ತಾಮಸಂದ್ರ ಸರ್ಕಲ್‌ನಲ್ಲಿ ನಡೆದಿದೆ. ಈ ಸಂಬಂಧ ಜಮೀನಿನ ಮಾಲೀಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಗ್ರಾಮದ ಟಿ.ಜಿ.ನಾರಾಯಣ್‌ ಎಂಬುವರಿಗೆ ಸೇರಿದ ಜಮೀನಿನಲ್ಲಿ ಕಳವು ನಡೆದಿದೆ. ಈ ಹಿಂದೆ ಕೂಡ ಎರಡು ಬಾರಿ ಕಳವು ನಡೆದಿತ್ತು. ಆ ಸಂದರ್ಭದಲ್ಲಿಯೇ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಪೊಲೀಸರು ಯಾವುದೇ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮತ್ತೆ ಕಳವು ನಡೆದಿದೆ ಎಂದು ಜಮೀನಿನ ಮಾಲೀಕ ಟಿ.ಜಿ.ನಾರಾಯಣ್‌ ದೂರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)