ದೊಡ್ಡಬಳ್ಳಾಪುರ: ಕೃಷಿ ವಿಜ್ಞಾನ ಕೇಂದ್ರದಿಂದ ತೆಂಗಿನ ಮರ ಹತ್ತುವ ತರಬೇತಿ ನೀಡಲಾಗುತ್ತಿದ್ದು ಗ್ರಾಮೀಣ ಯುವಜನರಿಗೆ ವರದಾನವಾಗಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎ.ಪಿ.ಮಲ್ಲಿಕಾರ್ಜುನಗೌಡ ಹೇಳಿದರು.

ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವಜನರಿಗೆ ಉದ್ಯೋಗ ಹಾಗೂ ಜೀವನೋಪಾಯ ಭದ್ರತೆ ಯೋಜನೆಯಡಿ ತೆಂಗು ಬೆಳೆ ಸುಧಾರಿತ ಬೇಸಾಯ ಪದ್ಧತಿ ಮತ್ತು ಯಾಂತ್ರೀಕರಣ ಕುರಿತ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿ ವಿಜ್ಞಾನ ಕೇಂದ್ರದಿಂದ ಈಚೆಗೆ ಎರೆಹುಳು ಸಾಕಾಣಿಕೆ ತರಬೇತಿ ಆಯೋಜಿಸಲಾಗಿತ್ತು. ಎರೆಹುಳು ಗೊಬ್ಬರ ತಯಾರಿಕೆ, ತೆಂಗಿನ ಮರ ಹತ್ತುವುದು ಮೊದಲಾದ ತರಬೇತಿ ಪಡೆದರೆ ನಗರ ಪ್ರದೇಶಗಳಿಗೆ ಕೆಲಸಕ್ಕಾಗಿ ವಲಸೆ ಹೋಗುವುದನ್ನು ತಡೆಯಬಹುದು ಎಂದರು.

ಜಿಕೆವಿಕೆ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಚಂದ್ರೇಗೌಡ ಅವರು ತೆಂಗಿನಲ್ಲಿ ಸುಧಾರಿತ ತಳಿ, ಬೇಸಾಯ ಕ್ರಮ ಮತ್ತು ಅದರ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು.

ತರಬೇತಿ ಸಂಯೋಜಕ ವಿಜ್ಞಾನಿ (ಬೇಸಾಯ ಶಾಸ್ತ್ರ) ಡಾ.ವೆಂಕಟೇಗೌಡ, ತೆಂಗಿನ ಬೇಸಾಯದಲ್ಲಿ ಉಪಯೋಗಿಸುವ ವಿವಿಧ ಯಂತ್ರ ಮತ್ತು ಅವುಗಳ ಬಳಕೆ ಬಗ್ಗೆ ಮಾಹಿತಿ ನೀಡಿದರು. ವಿಜ್ಞಾನಿ (ಮಣ್ಣು ವಿಜ್ಞಾನ) ಡಾ.ಪಿ.ವೀರನಾಗಪ್ಪ, ಮಣ್ಣು ಪರೀಕ್ಷೆ ಮಹತ್ವ ಮತ್ತು ತೆಂಗಿನ ಸಮಗ್ರ ಪೋಷಕಾಂಶಗಳ ಬಗ್ಗೆ ತಿಳಿಸಿದರು.

ಡಾ.ಬಿ.ಮಂಜುನಾಥ್ ವಿಜ್ಞಾನಿ (ಸಸ್ಯ ಸಂರಕ್ಷಣೆ) ತೆಂಗಿಗೆ ಬರುವ ಪ್ರಮುಖ ರೋಗ ಹಾಗೂ ಕೀಟಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಅನಿಲ್ಕುಮಾರ್ ಶಿಬಿರಾರ್ಥಿಗಳಿಗೆ ಯಂತ್ರ ಬಳಸಿ ತೆಂಗಿನ ಮರ ಹತ್ತುವ ಕೌಶಲ ಹೇಳಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.