ಮಂಗಳವಾರ, ಜನವರಿ 19, 2021
17 °C

‘ಬಡಜನರ ಆರೋಗ್ಯ ಕಾಪಾಡಲು ಬದ್ಧ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ಎಂ.ವಿ. ಜಯರಾಂ ಅವರ ಅಪೇಕ್ಷೆಯಂತೆ ಬಡಜನರಿಗೆ ಆರೋಗ್ಯ ಕಾಪಾಡಲು ಎಂ.ವಿ.ಜೆ ಕಾಲೇಜು ಬದ್ಧವಾಗಿದೆ ಎಂದು ಕಾಲೇಜಿನ ಪ್ರಧಾನ ವ್ಯವಸ್ಥಾಪಕ ನಿರ್ದೇಶಕಿ ಡಾ.ಧರಣಿ ಮೋಹನ್ ತಿಳಿಸಿದರು.

ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆದ ನಗರಸಭೆ ಮತ್ತು ಟೌನ್ ಕೋ ಆಪರೇಟಿವ್ ಬ್ಯಾಂಕ್ ಸದಸ್ಯರ ಸಭೆಯಲ್ಲಿ ಮಾತನಾಡಿದರು.‌

ಆಸ್ಪತ್ರೆಯ ಸಹಾಯಕ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಮೋದ್ ಮಾತನಾಡಿ, ಆಸ್ಪತ್ರೆಯಲ್ಲಿ ಅತ್ಯುತ್ತಮ ಚಿಕಿತ್ಸೆ ಲಭ್ಯವಿದೆ. ಕೊರೊನಾಗೂ ಮೊದಲು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಲಾಗಿದೆ ಎಂದರು.

ನಗರಸಭೆ ಅಧ್ಯಕ್ಷ ಡಾ.ಅರುಣ್ ಕುಮಾರ್‌, ಟೌನ್ ಬ್ಯಾಂಕ್ ಅಧ್ಯಕ್ಷ ಕೃಷ್ಣಪ್ಪ ಮಾತನಾಡಿದರು. ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಶೋಭಾ ಜುಂಜಪ್ಪ, ಟೌನ್ ಬ್ಯಾಂಕ್ ಉಪಾಧ್ಯಕ್ಷ ಬಾಲಚಂದ್ರ, ಪ್ರಾಂಶುಪಾಲ ರವಿಚಂದ್ರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು