ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಿನ ಬೆಳೆಗಾರರಿಗೆ ಪರಿಹಾರದ ಮೊದಲ ಕಂತು ಬಿಡುಗಡೆ

Last Updated 4 ಜೂನ್ 2020, 17:03 IST
ಅಕ್ಷರ ಗಾತ್ರ

ಆನೇಕಲ್: ‘ಕೋವಿಡ್‌-19 ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ತುತ್ತಾಗಿರುವ ಹೂವಿನ ಬೆಳೆಗಾರರಿಗೆ ಪರಿಹಾರ ನೀಡುವ ಸಲುವಾಗಿ ತಾಲ್ಲೂಕಿಗೆ ಒಟ್ಟು 57.5ಲಕ್ಷ ಮೊದಲ ಕಂತಿನ ಅನುದಾನ ಬಿಡುಗಡೆಯಾಗಿದೆ. ತ್ವರಿತವಾಗಿ ರೈತರ ಖಾತೆಗಳಿಗೆ ಜಮೆ ಮಾಡಲಾಗುವುದು' ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ ತಿಳಿಸಿದರು.

ಒಂದು ಹೆಕ್ಟೇರ್‌ಗೆ 25 ಸಾವಿರ ಪರಿಹಾರ ನೀಡಲಾಗುತ್ತಿದೆ. 732 ಹೂವಿನ ಬೆಳೆ ಬೆಳೆಯುವ ರೈತರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಬಾಳೆ, ಪಪ್ಪಾಯಿ, ದ್ರಾಕ್ಷಿ, ಅಂಜೂರ, ಅನಾನಸ್‌, ಕಲ್ಲಂಗಡಿ, ಕರಬೂಜ ಮತ್ತು ತರಕಾರಿ ಬೆಳೆಗಳಾದ ಟೊಮೆಟೊ, ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಗುಂಬಳ, ಬೂದುಗುಂಬಳ, ಕ್ಯಾರೆಟ್‌, ಈರುಳ್ಳಿ, ದಪ್ಪಮೆಣಸಿನಕಾಯಿ ಬೆಳೆಗಾರರಿಗೆ ಹೆಕ್ಟೇರ್‌ಗೆ ₹ 15ಸಾವಿರ ಪರಿಹಾರ ಘೋಷಿಸಲಾಗಿದೆ. ಈ ಪರಿಹಾರಧನ ಪಡೆಯುವ ಸಲುವಾಗಿ ಅರ್ಜಿ ಸಲ್ಲಿಸಲು ಜೂನ್‌ 15 ಕೊನೆಯ ದಿನಾಂಕವಾಗಿದೆ. ಆನೇಕಲ್‌ ತಾಲ್ಲೂಕಿನಲ್ಲಿ ಇದುವರೆಗೆ ಮೂರು ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರ ಕಚೇರಿಯನ್ನು ಸಂರ್ಪಕಿಸಲು ಕೋರಿದೆ. ಮೊಬೈಲ್‌ ಸಂಖ್ಯೆ 94484 65705 ದೂರವಾಣಿ ಸಂಖ್ಯೆ 080 27840454 ಸಂಪರ್ಕಿಸಲು ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT