ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಡಿಕೆಶಿ ಕುಟುಂಬದ ನಿಂದನೆ- ದೂರು

ಫೇಸ್ ಬುಕ್, ವಾಟ್ಸ್ಆ್ಯ‍ಪ್‌ನಲ್ಲಿ ಅವಾಚ್ಯ ಪದಗಳಿಂದ ನಿಂದನೆ ಆರೋಪ
Last Updated 31 ಮಾರ್ಚ್ 2021, 3:53 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಸೋಲೂರು ಗ್ರಾಮದ ಪಿಳ್ಳೆಗೌಡ ಎಂಬುವರ ವಿರುದ್ಧ ಕಾಂಗ್ರೆಸ್ ಕಾರ್ಯುಕರ್ತರು ವಿಶ್ವನಾಥಪುರ ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿ ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ಸಿ.ಡಿ.ರೂವಾರಿ ಯಾರು ಎಂದು ಈವರೆಗೆ ಸರ್ಕಾರ ಪತ್ತೆ ಹಚ್ಚಿಲ್ಲ. ಎಸ್.ಐ.ಟಿ ತನಿಖೆ ನಡೆದಿದೆ. ಹೀಗಿರುವಾಗ ಬಿಜೆಪಿ ಮುಖಂಡ ಎಂದು ಸ್ವಯಂ ಘೋಷಿಸಿಕೊಂಡಿರುವ ಪಿಳ್ಳೇಗೌಡ ಎಂಬುವರು ಡಿ.ಕೆ.ಶಿವಕುಮಾರ್ ಅವರ ಪತ್ನಿ, ಮಗಳು ಹಾಗೂ ತಾಯಿ ಬಗ್ಗೆ ಅತ್ಯಂತ ಕೆಟ್ಟ ಪದಗಳನ್ನು ಬಳಸಿ ಫೇಸ್ ಬುಕ್, ವ್ಯಾಟ್ಸ್ಆ್ಯ‍ಪ್‌ನಲ್ಲಿ ಹರಿಯಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜು ಮಾತನಾಡಿ, ಒಬ್ಬ ವ್ಯಕ್ತಿ ಮತ್ತು ಕುಟುಂಬದ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಬೇಕಾದರೆ ಪೂರ್ವಪರ ಯೋಚನೆ ಮಾಡಬೇಕು. ಸಂಬಂಧಿಸಿದ ದಾಖಲಾತಿ ಇರಬೇಕು. ವಿನಾಕಾರಣ ಮಾತನಾಡುವುದು ಸಭ್ಯತೆ ಅಲ್ಲ ಎಂದರು. ಕೆಪಿಸಿಸಿ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಾಂಗ್ರೆಸ್ ರಾಜ್ಯ ಘಟಕ ಉಪಾಧ್ಯಕ್ಷ ಜಗನ್ನಾಥ್, ಪ್ರಧಾನ ಕಾರ್ಯದರ್ಶಿ ಆರ್.ರವಿಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಜುನಾಥ್, ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಚೇತನ್ ಗೌಡ, ಮುಖಂಡರಾದ ಜಯರಾಮಯ್ಯ, ಸೋಮಣ್ಣ, ಜಿಲ್ಲಾ ಕಾಂಗ್ರೆಸ್ ಯುವಘಟಕ ಅಧ್ಯಕ್ಷ ಕೆ.ಆರ್.ನಾಗೇಶ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಮುನಿರಾಜು, ಗೋಪಾಲಕೃಷ್ಣ, ದೇವರಾಜ್, ಚಿನ್ನಪ್ಪ, ವೇಣುಗೋಪಾಲ್, ತ್ಯಾಗರಾಜ್, ವೃತ್ತ ನಿರೀಕ್ಷ ಮಲ್ಲಿಕಾರ್ಜುನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT