ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಗ್ರಾಮಾಂತರ ಜಿ.ಪಂ ಸಿಇಒ ವಿರುದ್ಧ ದೂರು

Published 18 ಮಾರ್ಚ್ 2024, 2:34 IST
Last Updated 18 ಮಾರ್ಚ್ 2024, 2:34 IST
ಅಕ್ಷರ ಗಾತ್ರ

ದೇವನಹಳ್ಳಿ: ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎನ್‌.ಅನುರಾಧ ಅವರ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.  

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಆಪ್ತ ಕಾರ್ಯದರ್ಶಿ ಪತ್ನಿಯಾಗಿರುವ ಅನುರಾಧ, ಸಚಿವರ ಸಂಬಂಧಿಯೂ ಆಗಿದ್ದಾರೆ. ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಪರ ಅಧಿಕಾರಿಗಳು ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಯಲಹಂಕದ ವಕೀಲ ಜಿ.ಎನ್‌.ವೆಂಕಟರಮಣಪ್ಪ ದೂರು ನೀಡಿದ್ದಾರೆ.

ಅನುರಾಧ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಚುನಾವಣೆ ಆಯೋಗ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT