ಶುಕ್ರವಾರ, ಡಿಸೆಂಬರ್ 13, 2019
20 °C

ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಅಸಹಾಯಕರಾಗಿದ್ದ ಪಶುವೈದ್ಯೆಯ ದ್ವಿಚಕ್ರ ವಾಹನಕ್ಕೆ ಪಂಕ್ಚರ್ ಹಾಕಿಸುವ ಸಹಾಯ ನೀಡುವ ನೆಪದಲ್ಲಿ ಅತ್ಯಾಚಾರ ಮಾಡಿ ಕೊಂದಿರುವುದು ಪೈಶಾಚಿಕ ಕೃತ್ಯ. ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕೆಲಸ ಇದು ಎಂದು ಕರ್ನಾಟಕ ಪಶುವೈದ್ಯಕೀಯ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಸ್.ನಾರಾಯಣಸ್ವಾಮಿ ಖಂಡಿಸಿದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವು ಜನರಲ್ಲಿ ಸಹಜವಾಗಿ ಭಯಕ್ಕೆ ಕಾರಣವಾಗಿದೆ. ವೈದ್ಯೆಯ ಮಹಿಳೆಯ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ದುರಂತ. ಹತ್ಯೆ ಆರೋಪದಲ್ಲಿ ಬಂಧಿತರಾಗಿರುವ ನಾಲ್ಕು ಮಂದಿ 20 ವಯಸ್ಸಿನ ಆಸುಪಾಸಿನವರಾಗಿದ್ದಾರೆ. ಅವರಲ್ಲಿ ಇಂತಹ ಕ್ರೂರತ್ವದ ಮನಸ್ಥಿತಿ ಬರಲಿಕ್ಕೆ ಮೂಲ ಕಾರಣವೇನು. ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡುವುದರ ಹಿಂದಿನ ಮರ್ಮವೇನು ಎನ್ನುವ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಹೆಣ್ಣು ಮಕ್ಕಳು, ಮಹಿಳೆಯರು ಸುರಕ್ಷಿತವಾಗಿ ಮನೆಗೆ ವಾಪಸ್‌ ಬರುವ  ಖಾತರಿಯೇ ಇಲ್ಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ವೈದ್ಯೆಯ ಆತ್ಮಕ್ಕೆ ಶಾಂತಿ ಸಿಗಬೇಕಾದರೆ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದರ ಜತೆಗೆ ಅವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಸರ್ಕಾರಗಳು, ಮಹಿಳೆಯರು, ಹೆಣ್ಣು ಮಕ್ಕಳ ರಕ್ಷಣೆಗಾಗಿ ವಿಶೇಷ ಕಾನೂನು ರೂಪಿಸಿ ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಮುಂದೆ ಇಂತಹ ಕ್ರೂರವಾದ ಕೃತ್ಯಗಳು ನಡೆಯದಂತೆ ಜಾಗ್ರತೆ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಕ್ರಿಯಿಸಿ (+)