ದೊಡ್ಡಬಳ್ಳಾಪುರ: ಇಂಧನ ಬೆಲೆ ಏರಿಕೆಗೆ ಖಂಡನೆ

ದೊಡ್ಡಬಳ್ಳಾಪುರ: ಪ್ರತಿ ನಿತ್ಯವು ತೈಲ ಬೆಲೆ ಏರಿಕೆಯಾಗುತ್ತಲೇ ಇದೆ. ಇದರ ಜೊತೆಗೆ ಸೋಮವಾರ ಮಂಡನೆಯಾಗಿರುವ ಬಜೆಟ್‌ನಲ್ಲೂ ಸಹ ಪೆಟ್ರೋಲ್ ಹಾಗೂ ಡಿಸೇಲ್ ದರವನ್ನು ಏರಿಕೆ ಮಾಡಿರುವುದು ಖಂಡನೀಯ ಎಂದು ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷ ಶಿವಶಂಕರ್ ಹೇಳಿದರು.
ವೇದಿಕೆಯ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಪ್ರತಿ ನಿತ್ಯ ಇಂಧನ ದರ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗುತ್ತಲೇ ಇದೆ. ಆದರೆ ನಮ್ಮ ದೇಶದಲ್ಲಿ ಮಾತ್ರ ಹಲವಾರು ರೀತಿಯ ತೆರಿಗೆಗಳನ್ನು ವಿಧಿಸುವ ಮೂಲಕ ಬೆಲೆ ಏರಿಸಲಾಗುತ್ತಿದೆ.ಇದರಿಂದ ದಿನ ನಿತ್ಯದ ಜನಜೀವನದ ಮೇಲೆ ಕೆಟ್ಟಪರಿಣಾಮ ಬೀರಲಿದೆ ಎಂದರು.
ಪ್ರತಿಭಟನೆಯಲ್ಲಿ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್, ತಾಲ್ಲೂಕು ಅಧ್ಯಕ್ಷ ವೆಂಕಟೇಶ್ ಹಾಗೂ ಪದಾಧಿಕಾರಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.