ದೇವನಹಳ್ಳಿ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಚ್.ಮುನಿಯಪ್ಪ ಅವರನ್ನು ಘೋಷಣೆ ಮಾಡಿದ ನಂತರ ಅವರ ವಿರುದ್ಧ ಸ್ಪರ್ಧೆ ಮಾಡುವುದಿಲ್ಲ ಎಂಬ ಸಾಕಷ್ಟು ವದಂತಿ ಹರಿದಾಡುತ್ತಿದೆ. ಇದಕ್ಕೆ ಯಾವುದೇ ಕಾರ್ಯಕರ್ತರು, ಮತದಾರರು ಗೊಂದಲಕ್ಕೆ ಒಳಗಾಗಬಾರದು ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲು ಮಾತನಾಡಿದ ಅವರು, 'ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಬಗ್ಗೆ ಗೌರವವಿದೆ. ನಾವಿಬ್ಬರೂ ಒಂದೇ ಸಮುದಾಯದವರು. ಆದರೆ, ಸ್ಪರ್ಧೆಯಿಂದ ವಿಮುಖನಾಗುವುದಿಲ್ಲ‘ ಎಂದರು.
'ಒಂದೇ ಸಮುದಾಯದವರು ಎಂದ ಮಾತ್ರಕ್ಕೆ ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಯಾವುದೇ ಕಾನೂನು ಇಲ್ಲ. ಹೈಕಮಾಂಡ್ ಸೂಚಿಸಿದರೆ ಬಿಜೆಪಿಯಿಂದ ಸ್ಪರ್ಧಿಸಲು ಬದ್ಧನಾಗಿದ್ದೇನೆ' ಎಂದರು.
'ಪಕ್ಷ ಸೆರ್ಪಡೆಯಾಗುವ ಮುನ್ನ ಪಕ್ಷದ ವರಿಷ್ಠರು ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಶೇ 100ರಷ್ಟು ಬಿಜೆಪಿ ಟಿಕೆಟ್ ನೀಡುವ ವಿಶ್ವಾಸವಿದೆ. ಈಗಾಗಲೇ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ನಾನು ಶಾಸಕನಾಗಿ ಮಾಡಿದ್ಧ ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆಯಾಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೈಯಪ್ಪ ಮಾಜಿ ಅಧ್ಯಕ್ಷ ಎಸ್‌ಎಲ್‌ಎನ್ ಅಶ್ವತ್ಥ್ ನಾರಾಯಣ್, ತಾ.ಪಂ ಮಾಜಿ ಉಪಾಧ್ಯಕ್ಷ ಎಸ್.ಎಂ.ನಾರಾಯಣಸ್ವಾಮಿ, ಪುರಸಭೆ ಸದಸ್ಯ ಬಾಂಬೆ ನಾರಾಯಣಸ್ವಾಮಿ, ರಾಜ್ಯ ಪರಿಷತ್ ಸದಸ್ಯ ದೇ.ಸು.ನಾಗರಾಜ್, ಟೌನ್ ಬಿಜೆಪಿ ಅಧ್ಯಕ್ಷ ಸಂದೀಪ್, ಕಾರ್ಯಕರ್ತರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.