ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ

Last Updated 14 ಮೇ 2020, 13:17 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಚೆನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಿಪಾಳ್ಯ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಡ ಕೂಲಿ ಕಾರ್ಮಿಕರಿಗೆ ಸರ್ಕಾರದ ದಿನಸಿ ಕಿಟ್‍ಗಳನ್ನು ಶಾಸಕ ಟಿ.ವೆಂಕಟರಮಣಯ್ಯ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ‘ತಾಲ್ಲೂಕಿನ ಕೋಡಿಪಾಳ್ಯದಲ್ಲಿ ಕೊರೊನಾ ಸೋಂಕು ದೃಢಪಟ್ಟ ಪ್ರಕರಣ ನಡೆದಿದ್ದು, ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿರುವುದು ಸಂತಸದ ವಿಚಾರ. ಗ್ರಾಮವನ್ನು ಸೀಲ್‍ಡೌನ್ ಮಾಡಿದ ಸಮಯದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಅವಿರತವಾಗಿ ಕಾರ್ಯ ನಿರ್ವಹಿಸಿರುವುದು ಅಭಿನಂದನೀಯ. ಜಿಲ್ಲೆಯ ಎಲ್ಲಾ ಪ್ರಕರಣಗಳು ಸಹ ಸುಖಾಂತ್ಯ ಕಂಡಿರುವುದು ಒಳ್ಳೆಯ ಬೆಳವಣಿಗೆ. ಹಾಗೆಂದು ನಾವು ಎಚ್ಚರ ತಪ್ಪದೇ ಕೊರೊನಾ ವೈರಸ್‌ ಸೋಂಕು ಹೋಗಲಾಡಿಸಲು ಇರುವ ಮಾರ್ಗಸೂಚಿಗಳನ್ನು ತಪ್ಪದೇ ಎಲ್ಲರೂ ಪಾಲಿಸಬೇಕಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಚುಂಚೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಚೆನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗನಾಥ್, ಮುಖಂಡರಾದ ಆರ್‌.ಸಿ.ರಾಮಲಿಂಗಯ್ಯ, ವಿಎಸ್‌ಎಸ್‌ಎನ್‌ ಉಪಾಧ್ಯಕ್ಷ ಸಿದ್ದಲಿಂಗಯ್ಯಸ್ವಾಮಿ, ಸದಸ್ಯರಾದ ಕುಮಾರ್‌ಬಾಬು, ಮುನಿರಾಜು,ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT