ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲಪ್ಪ ಪುತ್ರ ಮರಳಿ ಕಾಂಗ್ರೆಸ್‌ಗೆ

Last Updated 28 ಫೆಬ್ರವರಿ 2023, 5:57 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಹಿರಿಯ ರಾಜಕಾರಣಿ ಆರ್‌.ಎಲ್‌.ಜಾಲಪ್ಪ ಅವರ ಪುತ್ರ ಜೆ.ನರಸಿಂಹಸ್ವಾಮಿ ಅವರು ಸೋಮವಾರ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು.

ಶಾಸಕ ಟಿ.ವೆಂಕಟರಮಣಯ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ‌ ಜಿ.ಚುಂಚೇಗೌಡ, ಸಿ.ಡಿ.ಸತ್ಯನಾರಾಯಣಗೌಡ, ರಾಮಕೃಷ್ಣ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

2008ರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಗೆದ್ದು ಮೊದಲ ಬಾರಿಗೆ ಶಾಸಕರಾಗಿದ್ದ ನರಸಿಂಹಸ್ವಾಮಿ ಕೇವಲ ಒಂದು ತಿಂಗಳೊಳಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು. ನಂತರ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಅದಾದ ನಂತರ 2013 ಮತ್ತು 2018ರಲ್ಲಿ ನಡೆದ ಎರಡೂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಎರಡೂ ಚುನಾವಣೆಯಲ್ಲಿ ಅವರು ಕ್ರಮವಾಗಿ ನಾಲ್ಕು ಹಾಗೂ ಮೂರನೇ ಸ್ಥಾನಕ್ಕೆ ಕುಸಿದಿದ್ದರು. ಆ ನಂತರ ಬಿಜೆಪಿಯಲ್ಲಿ ಇದ್ದೂ ಇಲ್ಲದಂತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT