ಬುಧವಾರ, ಫೆಬ್ರವರಿ 1, 2023
16 °C
ನೆಲವಾಗಿಲು ಗ್ರಾಮ ಪಂಚಾಯಿತಿಯ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

ರೈತರ ಅಭಿವೃದ್ಧಿಗೆ ಕಾಂಗ್ರೆಸ್‌ ಆದ್ಯತೆ: ಶಾಸಕ ಶರತ್‌ ಬಚ್ಚೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ‘ಕಡುಬಡವರು, ದಲಿತರು, ಹಿಂದುಳಿದ ವರ್ಗದವರಿಗೆ ಊಟ ದೊರಕುವಂತೆ ಮಾಡಿದ್ದು, ಕಾಂಗ್ರೆಸ್‌ ಸರ್ಕಾರದ ಸಾಧನೆ. ರಾಜ್ಯ ಇತಿಹಾಸದಲ್ಲಿ ಯಾವ ಸರ್ಕಾರವೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಿರುವಷ್ಟು ಸಾಧನೆ ಮಾಡಿಲ್ಲ. ರೈತರ ಹಾಗೂ ಬಡಜನರ ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ’ ಎಂದು ಶಾಸಕ ಶರತ್‌ ಬಚ್ಚೇಗೌಡ ತಿಳಿಸಿದರು.

ತಾಲ್ಲೂಕಿನ ನಂದಗುಡಿ ಹೋಬಳಿಯ ನೆಲವಾಗಿಲು ಗ್ರಾ.ಪಂ. ವ್ಯಾಪ್ತಿ ಮಂಗಳವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು
ಮಾತನಾಡಿದರು.

‘ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪಾರದರ್ಶಕ ಆಡಳಿತ ನಡೆಸುವ ಮೂಲಕ ಜನಪ್ರಿಯತೆಗಳಿಸಿದೆ. ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್‌ ಅಧಿಕಾರಕ್ಕೇರಿದ ತಕ್ಷಣ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿಗೆ ಅಕ್ಕಿ ವಿತರಿಸಲಾಗುತ್ತದೆ’ ಎಂದು ತಿಳಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ ದತ್ತ ಮಾತನಾಡಿ, ‘ಶರತ್‌ ಬಚ್ಚೇಗೌಡರಂತಹ ಯುವ ನಾಯಕನನ್ನು ಆರಿಸಿ ಕಳುಹಿಸಿದ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ. ಅಭಿವೃದ್ಧಿಗೆ ಶ್ರಮಿಸುತ್ತಿರುವ ಅವರನ್ನು ಮತ್ತೊಮ್ಮೆ ಗೆಲ್ಲಿಸಿದರೆ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವ ಪದವಿ ಪಡೆಯುವುದು ನಿಶ್ಚಿತ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖಂಡ ಬಿ.ಎನ್. ಗೋಪಾಲಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಶಾಮಣ್ಣ, ಕಾರ್ಯದರ್ಶಿ ಬಿ. ಗೋಪಾಲ್, ಪಕ್ಷದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಿ.ಆರ್‌. ಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಬಚ್ಚೇಗೌಡ, ಸಗೀರ್‌ ಅಹಮದ್, ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ ಮಂಜುನಾಥ್, ಉಪಾಧ್ಯಕ್ಷ ಮಧುಸೂದನ್, ಎಸ್ಎಫ್‌ಸಿಎಸ್‌ ಅಧ್ಯಕ್ಷ ಮಂಜುನಾಥ್‌  ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು