ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಘಟಕಕ್ಕೆ ನೇಮಕ

Last Updated 22 ಅಕ್ಟೋಬರ್ 2020, 4:02 IST
ಅಕ್ಷರ ಗಾತ್ರ

ವಿಜಯಪುರ: ‘ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದಡಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ’ ಎಂದು ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಎಂ. ಲೋಕೇಶ್ ಹೇಳಿದರು.

ಚನ್ನರಾಯಪಟ್ಟಣ ಹೋಬಳಿ ಚೌಡಪ್ಪನಹಳ್ಳಿಯಲ್ಲಿ ಹೊಸಕೋಟೆ ತಾಲ್ಲೂಕು ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷರಾಗಿ ಎಂ. ರವಿ ಅವರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರದ ಕಾರ್ಯವೈಖರಿಯಿಂದ ಜನರು ಬೇಸತ್ತಿದ್ದಾರೆ. ಕಾಂಗ್ರೆಸ್ ಕಡೆಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ರಾಜ್ಯ ಸರ್ಕಾರ, ಕೊರೊನಾ ಸೋಂಕು ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ನಾಯಕರ ಮೇಲೆ ದ್ವೇಷದ ರಾಜಕಾರಣ ಮಾಡಲು ಹೊರಟಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT