ಬುಧವಾರ, ಆಗಸ್ಟ್ 10, 2022
21 °C

ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಪಂಚಾಯಿತಿಗಳಿಗೆ ಶಕ್ತಿ ತುಂಬಿಸಲು ಅಧಿಕಾರ ವಿಕೇಂದ್ರೀಕರಣ ಗೊಳಿಸಿದ್ದ ಮಾಜಿ ಪ್ರಧಾನಿ ದಿ.ರಾಜೀವ ಗಾಂಧಿ ಅವರ ಕನಸು ನನಸು ಮಾಡುವ ಹೊಣೆಗಾರಿಕೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ’ ಎಂದು ಕಾಂಗ್ರೆಸ್ ಮುಖಂಡ ಮುನಿನರಸಿಂಹಯ್ಯ ಹೇಳಿದರು.

ಚನ್ನರಾಯಪಟ್ಟಣ ಹೋಬಳಿಯ ಚನ್ನಹಳ್ಳಿ ಸಮೀಪದ ಮಾರಮ್ಮ ದೇವಾಲಯದ ಬಳಿ ಬುಧವಾರ ಬೆಟ್ಟಕೋಟೆ ಹಾಗೂ ಚನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್‌ನಿಂದ ಮಾತ್ರವೇ ಜಾತ್ಯತೀತ ತತ್ವ ಕಾಪಾಡಲಿಕ್ಕೆ ಸಾಧ್ಯ. ಕ್ಷೇತ್ರದಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷ ಸದೃಢವಾಗಿದೆ. ಈ ಬಾರಿ ಎಲ್ಲಾ ಪಂಚಾಯಿತಿಗಳನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆದುಕೊಳ್ಳಲು ಉತ್ತಮವಾದ ಅವಕಾಶವಿದೆ ಎಂದು ಹೇಳಿದರು.

‌ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಮಾತನಾಡಿ‌ದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ರಾಮಚಂದ್ರಪ್ಪ, ಮುಖಂಡರಾದ ಕೆ. ವೆಂಕಟಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ. ಮಂಜುನಾಥ್, ಜಿ. ಲಕ್ಷ್ಮೀನಾರಾಯಣಪ್ಪ, ಪಿ. ಅನಂತಕುಮಾರಿ ಚಿನ್ನಪ್ಪ, ಲಕ್ಷ್ಮಣಗೌಡ, ಮುದುಗುರ್ಕಿ ನಾರಾಯಣಸ್ವಾಮಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಮ್ಮ ವೆಂಕಟೇಶ್, ಡೇವಿಡ್ ನಾರಾಯಣಸ್ವಾಮಿ, ರಾಜಣ್ಣ, ಭೈರೇಗೌಡ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು