ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ‘ಕಲಿತ ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿ’

Last Updated 4 ನವೆಂಬರ್ 2021, 6:24 IST
ಅಕ್ಷರ ಗಾತ್ರ

ಆನೇಕಲ್: ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಅಭಿವೃದ್ಧಿ ಬಗ್ಗೆ ಗಮನ ಹರಿಸಿದರೆ ಆ ಶಾಲೆ ಅಭಿವೃದ್ಧಿಯಾಗುತ್ತದೆ. ಈ ಮೂಲಕ ಕಲಿತ ಋಣವನ್ನು ತೀರಿಸಿದ ತೃಪ್ತಿ ವಿದ್ಯಾರ್ಥಿಗಳಿಗೆ ಬರುತ್ತದೆ ಎಂದು ಎಎಸ್‌ಬಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮಾರ್ಟೀನ್‌ ತಿಳಿಸಿದರು.

ಎಎಸ್‌ಬಿ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಿವೃತ್ತ ಶಿಕ್ಷಕರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಎಸ್‌ಬಿ ಸರ್ಕಾರಿ ಪದವಿಪೂರ್ವ ಕಾಲೇಜು 50 ವರ್ಷಗಳಿಗೂ ಹೆಚ್ಚು ಹಳೆಯದಾದ ಕಾಲೇಜು ಆಗಿದೆ. ಸಾವಿರಾರು ಮಂದಿ ವ್ಯಾಸಂಗ ಮಾಡಿದ್ದಾರೆ. ಆದರೆ ಇತ್ತೀಚೆಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿತ್ತು. ಕಳೆದ ವರ್ಷ 230 ವಿದ್ಯಾರ್ಥಿಗಳಿದ್ದರು. ಈ ವರ್ಷ ದಾಖಲಾತಿಯಲ್ಲಿ ಹೆಚ್ಚಳವಾಗಿದ್ದು 560 ಮಂದಿ ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದುತಿಳಿಸಿದರು.

ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ ಕೋರ್ಸ್‌ ಹೊಸದಾಗಿ ಪ್ರಾರಂಭವಾಗಿದ್ದು, ದಾನಿಗಳ ನೆರವಿನಿಂದ ಕಂಪ್ಯೂಟರ್‌ ಲ್ಯಾಬ್‌ ಎಂದುತಿಳಿಸಿದರು.

ಹಳೆಯ ವಿದ್ಯಾರ್ಥಿಗಳ ಸಂಘವು ಕಾಲೇಜಿನ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ಶೌಚಾಲಯ ದುರಸ್ತಿ ಕಾರ್ಯ, ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ, ಕಾಲೇಜಿಗೆ ಟಿ.ವಿ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಿದೆ. ಕಳೆದ ವರ್ಷ ಅತಿಥಿ ಶಿಕ್ಷಕರೊಬ್ಬರ ವೇತನವನ್ನು ಸಂಘದಿಂದ ನೀಡಲಾಗಿದೆ. ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಇಲಾಖೆಯ ನೆರವಿನಿಂದ ಕಾಲೇಜಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಎಎಸ್‌ಬಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಚಿನ್ನಪ್ಪ ವೈ. ಚಿಕ್ಕಹಾಗಡೆ ಮಾತನಾಡಿ, ಸಂಘದ ವತಿಯಿಂದ ಕಾಲೇಜಿನಲ್ಲಿ ಮೂಲಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ದಾನಿಗಳ ನೆರವಿನಿಂದ ಕಟ್ಟಡ ಪುನರ್‌ ನವೀಕರಣ ಮಾಡಲು ಕ್ರಿಯಾಯೋಜನೆ ಸಿದ್ದಪಡಿಸಲಾಗುತ್ತಿದೆ. 120ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಸಂಘದ ಸದಸ್ಯರಾಗಿದ್ದು ಎಲ್ಲರೂ ಎಂದುಹೇಳಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಕೆ. ಮಾದಯ್ಯ, ಟಿ.ವಿ. ನಾರಾಯಣಸ್ವಾಮಿ, ಎನ್‌. ಶ್ರೀನಿವಾಸ ಅವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT