ಬುಧವಾರ, ಡಿಸೆಂಬರ್ 8, 2021
28 °C

ಕುಕ್ಕರ್ ಸಿಡಿದು ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನಗರದ ಸೋಮೇಶ್ವರ ಬಡಾವಣೆಯಲ್ಲಿ ನಗರಸಭೆ ವತಿಯಿಂದ ನಡೆಸಲಾಗುತ್ತಿರುವ ನಿರಾಶ್ರಿತರ ಕೇಂದ್ರದಲ್ಲಿ ಅಡುಗೆ ಮಾಡುವ ವೇಳೆ ಕುಕ್ಕರ್ ಸಿಡಿದು ಕಿಶೋರ್ ಎಂಬಾತನ ಮುಖ ಹಾಗೂ ಕಣ್ಣಿಗೆ ತೀವ್ರ ಗಾಯವಾಗಿವೆ. 

ನಿರಾಶ್ರಿತರ ಕೇಂದ್ರದಲ್ಲಿ 15ಕ್ಕೂ ಹೆಚ್ಚು ಮಂದಿ ಆಶ್ರಯ ಪಡೆದಿದ್ದಾರೆ. ಇಲ್ಲಿ ಅಡುಗೆ ಸಿಬ್ಬಂದಿ ಕೊರತೆಯಿರುವುದರಿಂದ ಕೇಂದ್ರದಲ್ಲಿ ಉಳಿದುಕೊಂಡಿರುವವರೇ ನಿತ್ಯ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ರಾತ್ರಿ ಘಟನೆ ನಡೆದಿದ್ದರೂ ಯಾರೂ ಕೂಡ ಆಸ್ಪತ್ರೆಗೆ ದಾಖಲು ಮಾಡಿರಲಿಲ್ಲ. ಬೆಳಿಗ್ಗೆ ಸಾರ್ವಜನಿಕರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.