ದೇವನಹಳ್ಳಿ: ಗ್ರಾಮೀಣ ಭಾಗದಲ್ಲಿ ರೈತಾಪಿ ವರ್ಗಕ್ಕೆ ಆರ್ಥಿಕ ಚೈತನ್ಯ ಒದಗಿಸುವ ಮೂಲಕ ಗ್ರಾಮೀಣ ಭಾರತ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದಾಗಿದೆ ಎಂದು ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ವಿ.ಪ್ರಸನ್ನ ಕುಮಾರ್ ತಿಳಿಸಿದರು.

ತಾಲ್ಲೂಕಿನ ವಿಶ್ವನಾಥಪುರ ಗ್ರಾ.ಪಂ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣಾಭಿವೃದ್ಧಿ ವಿಚಾರವಾಗಿ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಸಂಸ್ಥೆಗಳ ಎಲ್ಲಾ ಸದಸ್ಯರೂ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗಿಯಾಗುವಂತೆ ಮಾಡಬೇಕಿದೆ ಎಂದರು.

ಬಿದಲೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸಿಇಒ ವೆಂಕಟೇಶ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಸಹಕಾರಿ ಸಂಸ್ಥೆಗಳು ಸಹಾಯ ಮಾಡುತ್ತದೆ. ವ್ಯವಸಾಯ ಅಭಿವೃದ್ಧಿ ಹಾಗೂ ಕೃಷಿಗೆ ಬೇಕಿರುವ ಅಗತ್ಯತೆಗಳ ಗುಣಮಟ್ಟ ಸುಧಾರಣೆಯಾಗಿದೆ ಎಂದರು.

ಸಹಕಾರಿ ಉದ್ಯಮವನ್ನು ಪರಿವರ್ತಿಸಬೇಕಿದ್ದು, ಅದಕ್ಕಾಗಿ ಅಗತ್ಯವಿರುವ ಮೂಲ ಸೌಕರ್ಯಗಳು, ಆಡಳಿತದಲ್ಲಿ ಸುಧಾರಣೆ, ವೃತ್ತಿಪರತೆ, ತಂತ್ರಜ್ಞಾನ ಅಳವಡಿಕೆ ಇಲ್ಲಿ ಮುಖ್ಯವಾಗಿರುತ್ತದೆ. ಇದರ ಕುರಿತು ಸಮಗ್ರವಾಗಿ ಕ್ರಿಯಾ ಯೋಜನೆ ಜಾರಿಯಾಗಬೇಕು ಎಂದು ಜಿಲ್ಲಾ ಸಹಕಾರಿ ಒಕ್ಕೂಟದ ನಿರ್ದೇಶಕ ಜಿ.ಎಸ್.ಸಂಪಂಗಿ ಗೌಡ ತಿಳಿಸಿದರು.

ಜಿಲ್ಲಾ ಸಹಕಾರಿ ಒಕ್ಕೂಟದ ಉಪಾಧ್ಯಕ್ಷ ಕಾರಹಳ್ಳಿ ಜಯರಾಮ್ ಅಧ್ಯಕ್ಷತೆವಹಿಸಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಹಿತ್ತರಹಳ್ಳಿ ರಮೇಶ್, ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಜೆ. ಹೇಮಲತಾ, ಜಿಲ್ಲಾ ಸಹಕಾರಿ ಒಕ್ಕೂಟದ ಸಿಇಒ ಶಿವಕುಮಾರ್, ವಿಶ್ವನಾಥಪುರ ವಿಎಸ್ಎಸ್ಎನ್ ಸಿಇಒ ಕೃಷ್ಣಮೂರ್ತಿ, ನಿರ್ದೇಶಕರಾದ ಸುಬ್ಬೆಗೌಡ, ನರಸಿಂಹರಾಜು, ರಮೇಶ್, ಮುನಿರಾಜು, ಅರ್ಜುನ್ ಗೌಡ, ಚಂದ್ರಪ್ಪ, ರವಿ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.