ಮಂಗಳವಾರ, ಮಾರ್ಚ್ 9, 2021
31 °C
ಡಿಸಿಸಿ ಬ್ಯಾಂಕ್ ಶಾಖೆಗಳಿಗೆ ಸಚಿವ ಎಸ್‌.ಟಿ. ಸೋಮಶೇಖರ್‌ ಭೇಟಿ, ಸಮಾಲೋಚನೆ

ಸಹಕಾರಿ ನಡಿಗೆ ಡಿಸಿಸಿ ಬ್ಯಾಂಕ್ ಕಡೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಪ್ರಸಕ್ತ ಸಾಲಿನಲ್ಲಿ ಸಹಕಾರಿ ನಡಿಗೆ ಡಿಸಿಸಿ ಬ್ಯಾಂಕ್ ಕಡೆಗೆ ಎಂಬ ಧ್ಯೇಯದೊಂದಿಗೆ ರಾಜ್ಯದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಎಲ್ಲ ಅಂಕಿ-ಅಂಶ  ಪಡೆಯಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಇಲ್ಲಿನ ಹೊಸಕೋಟೆ ಹಾಗೂ ದೇವನಹಳ್ಳಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ) ಶಾಖೆಗಳಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ರಾಜ್ಯದ 24.50 ಲಕ್ಷ ರೈತರಿಗೆ ಶೀಘ್ರವಾಗಿ ₹15,300 ಕೋಟಿ ಬೆಳೆ ಸಾಲ ಫೆಬ್ರುವರಿ ಮಾಸಾಂತ್ಯದೊಳಗೆ ಸಂಪೂರ್ಣ ಸಾಲ ವಿತರಣೆ ಮಾಡಲು ಗುರಿ ಹೊಂದಲಾಗಿದೆ. ಈಗಾಗಲೇ 19.50ಲಕ್ಷ ರೈತರಿಗೆ ₹12.50 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ ಎಂದರು. 

ಸಾಲ ನೀಡಿಕೆಯಲ್ಲಿ ಹಿನ್ನಡೆಯಾಗಿದೆ  ಎಂಬ ಬಗ್ಗೆ ಮಾಹಿತಿ ಕಲೆಹಾಕಿ ಶೀಘ್ರದಲ್ಲಿ ಗುರಿ ಮುಟ್ಟುವಂತೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ ಮಂಡ್ಯದ ಪಾಂಡವಪುರ, ನಾಗಮಂಗಲ, ಮೈಸೂರಿನ ಟಿ.ನರಸೀಪುರ ಡಿಸಿಸಿ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಜಿಲ್ಲೆಯ ಹೊಸಕೋಟೆ ಹಾಗೂ ದೇವನಹಳ್ಳಿ ಡಿಸಿಸಿ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಚನೆ ನೀಡಿದ್ದೇನೆ ಎಂದರು.

ಮುಖ್ಯಮಂತ್ರಿ ನಿರ್ದೇಶನದಂತೆ ₹15,300 ಕೋಟಿ ರೂಪಾಯಿ ಸಾಲ ನೀಡುವ ಗುರಿಯನ್ನು ಸಹಕಾರ ಇಲಾಖೆಯಿಂದ ಹಾಕಿಕೊಳ್ಳಲಾಗಿತ್ತು. ಅದರಂತೆ ಒಟ್ಟು 24.50 ಲಕ್ಷ ರೈತರಿಗೆ ಸಾಲ ವಿತರಣೆ ಮಾಡುವ ಹೊಣೆಯನ್ನು ಅಪೆಕ್ಸ್, 21 ಡಿಸಿಸಿ ಬ್ಯಾಂಕ್ ಹಾಗೂ ಪ್ಯಾಕ್ಸ್ ಗಳಿಗೆ ವಹಿಸಲಾಗಿತ್ತು. ಈಗಾಗಲೇ 19,17,334 ರೈತರಿಗೆ ₹12,420.10 ಕೋಟಿ  ಸಾಲ ವಿತರಣೆ ಮಾಡಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಬೆಂಗಳೂರಿನ ಚಾಮರಾಜನಗರದಲ್ಲಿರುವ ಡಿಸಿಸಿ ಬ್ಯಾಂಕ್ ಒಟ್ಟಾರೆಯಾಗಿ ವಿತರಣೆ ಮಾಡಿರುವ ಸಾಲ, ಮರುಪಾವತಿ ಹಾಗೂ ಹಾಕಿಕೊಂಡಿರುವ ಗುರಿಗಳ ಬಗ್ಗೆ ಸಚಿವರು ಮಾಹಿತಿ ಕೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬ್ಯಾಂಕ್ ಅಧಿಕಾರಿಗಳು, ಪ್ರಸಕ್ತ ಸಾಲಿನಲ್ಲಿ 1ಲಕ್ಷ ಮಂದಿಗೆ ₹550 ಕೋಟಿ ರೂಪಾಯಿ ಸಾಲ ನೀಡಬೇಕೆಂಬ ಗುರಿ ಹೊಂದಲಾಗಿತ್ತು. ಇದುವರೆಗೂ 80060 ರೈತರಿಗೆ ₹421ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬ್ಯಾಂಕ್ ನಗರ ಹಾಗೂ ಗ್ರಾಮಾಂತರ ಬಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾದ ಹನುಮಂತಯ್ಯ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕೃಷ್ಣಮೂರ್ತಿ, ಪಟ್ಟಾಭಿರಾಮಯ್ಯ, ಮಂಡಿಬೆಲೆ ರಾಜಣ್ಣ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

ಬಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾದ ಹನುಮಂತಯ್ಯ, ಉಪಾಧ್ಯಕ್ಷ ಪಟ್ಟಾಭಿರಾಮಯ್ಯ, ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಯ್ಕ್, ಟಿಎಪಿಸಿಎಂ ನ ಅಧ್ಯಕ್ಷರಾದ ಮಂಜುನಾಥ ಹಾಗೂ ಮಂಡಿಬೆಲೆ ರಾಜಣ್ಣ ಸೇರಿ
ದಂತೆ ಮತ್ತಿತರರು ಇತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು