ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್‌ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ: ಕೊರೊನಾ ಸೋಂಕು ತಡೆಗೆ ಕಾರ್ಯಪಡೆ

Last Updated 27 ಮಾರ್ಚ್ 2020, 15:41 IST
ಅಕ್ಷರ ಗಾತ್ರ

ಆನೇಕಲ್ : ತಾಲ್ಲೂಕಿನಲ್ಲಿ ಕೊರೊನಾ ಸೋಂಕು ಹರಡುವುದು ತಡೆಯುವ ನಿಟ್ಟಿನಲ್ಲಿ ತಾಲ್ಲೂಕುಮಟ್ಟದ ಕಾರ್ಯಪಡೆ ರಚಿಸಲಾಗಿದ್ದು ಪ್ರತಿದಿನ ಸಭೆ ಸೇರಿ ಪರಿಸ್ಥಿತಿ ಅವಲೋಕಿಸಲಾಗುತ್ತಿದೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್‌ ಸಿ.ಮಹಾದೇವಯ್ಯ ತಿಳಿಸಿದರು.

ಅವರು ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

‘ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹಕಾರ ನೀಡಬೇಕು. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಿ ಕೊರೊನಾ ತಡೆಗೆ ಕಠಿಬದ್ದರಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ತಂಡಗಳು ಕಾರ್ಯನಿರ್ವಹಿಸಬೇಕು. ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲಾ ಗ್ರಾಮಪಂಚಾಯಿತಿಗಳು ಮತ್ತು ಪುರಸಭೆ, ನಗರ ಸಭೆಗಳಲ್ಲಿ ಕ್ರಿಯಾ ಯೋಜನೆ ರೂಪಿಸಿಕೊಂಡು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.

‘ಇಂದಿರಾ ಕ್ಯಾಂಟೀನ್‌ನಲ್ಲಿ ಕಡಿಮೆ ದರದಲ್ಲಿ ಪ್ರತಿದಿನ 500 ಮಂದಿಗೆ ತಿಂಡಿ ಮತ್ತು ಊಟದ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಇದರಿಂದಾಗಿ ಕೂಲಿಕಾರ್ಮಿಕರು ಮತ್ತು ಬಡವರಿಗೆ ಅನುಕೂಲವಾಗಲಿದೆ. ಊಟ-ತಿಂಡಿಯನ್ನು ಪಾರ್ಸೆಲ್‌ ಮೂಲಕ ಕಳುಸಹಿಬೇಕು. ಯಾವುದೇ ಕಾರಣಕ್ಕೂ ಕ್ಯಾಂಟೀನ್‌ನಲ್ಲಿ ಸೇವಿಸಲು ಅವಕಾಶ ಮಾಡಬಾರದು ಮತ್ತು ಇಂದಿರಾ ಕ್ಯಾಂಟೀನ್‌ ಸಿಬ್ಬಂದಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ತಿಳಿಸಲಾಗಿದೆ. ಆನೇಕಲ್‌ನಲ್ಲಿ ಪುರಸಭೆಯ ವತಿಯಿಂದ 10 ಸರಕು ಸಾಗಾಣಿಕೆ ವಾಹನಗಳ ಮೂಲಕ ಎಲ್ಲಾ ವಾರ್ಡ್‌ಗಳಿಗೂ ತರಕಾರಿ ಮತ್ತಿತರ ದಿನಬಳಕೆಯ ವಸ್ತುಗಳನ್ನು ಮನೆಗಳ ಬಳಿಗೇ ಕಳುಹಿಸಿಕೊಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಇದಕ್ಕೆ ಪೊಲೀಸರು ಒಪ್ಪಿದ್ದಾರೆ. ಇದರಿಂದ ಹೆಚ್ಚು ಜನರು ಒಂದೆಡೆ ಸೇರುವುದನ್ನು ತಡೆಯಲು ಸಾಧ್ಯ. ಹಾಗಾಗಿ ಶನಿವಾರದಿಂದ ವಾಹನ ಸಂಚರಿಸಲಿದೆ’ ಎಂದು ತಿಳಿಸಿದರು.

‘ತಾಲ್ಲೂಕು ಆರೋಗ್ಯ ಇಲಾಖೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ತಂಡವು ಜನರಿಗೆ ಎಲ್ಲಾ ನೆರವು ನೀಡಲು ಸನ್ನದ್ಧವಾಗಿದೆ’ ಎಂದು ತಿಳಿಸಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಜ್ಞಾನಪ್ರಕಾಶ್‌ ಮಾತನಾಡಿ, ‘ಆನೇಕಲ್‌ ತಾಲ್ಲೂಕಿನಲ್ಲಿ 14 ಮಂದಿ ಹೋಂ ಕ್ವಾರೈಂಟನ್‌ನಲ್ಲಿದ್ದಾರೆ. ಇವರ ಮನೆಗಳ ಬಳಿ ಬೋರ್ಡ್‌ ಹಾಕಲಾಗಿದೆ. ನಿಗದಿತ ಅವಧಿಯವರೆಗೂ ಪ್ರತ್ಯೇಕ ವಾಸದಲ್ಲಿರಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಈ ಮನೆಗಳನ್ನು ನಿಗಾ ವಹಿಸುತ್ತಿದ್ದಾರೆ’ ಎಂದು ತಿಳಿಸಿದರು.

ಆನೇಕಲ್‌ ಸರ್ಕಲ್‌ ಇನ್‌ಸ್ಪೆಕ್ಟರ್‌ ಕೃಷ್ಣ ಮಾತನಾಡಿ, ಕೆಲವು ಗ್ರಾಮಗಳಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮಗಳಿಗೆ ಪ್ರವೇಶಿಸಿದಂತೆ ನಿರ್ಬಂಧ ಹಾಕಿರುವುದು ಕಂಡುಬಂದಿದೆ. ಮನೆಗಳಲ್ಲಿಯೇ ಉಳಿಯಬೇಕೆ ವಿನಃ ಗ್ರಾಮಗಳಿಗೆ ಯಾರು ಬರದಂತೆ ತಡೆಯುವುದು ಸರಿಯಲ್ಲ. ಹಾಗಾಗಿ ಇವುಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಪೊಲೀಸರು ಜನರ ಆರೋಗ್ಯದ ದೃಷ್ಠಿಯಿಂದ ಹಗಲಿರುಳೆನ್ನದೇ ದುಡಿಯುತ್ತಿದ್ದಾರೆ. ಇದಕ್ಕೆ ಜನರ ಸ್ಪಂದನೆ ಅವಶ್ಯಕ. ತರಕಾರಿ ಮತ್ತಿತರ ದಿನಬಳಕೆಯ ಮಾರಾಟ ಮಾಡುವವರಿಗೆ ಮತ್ತು ಅಗತ್ಯ ಸೇವೆಗಳಲ್ಲಿ ಕೆಲಸ ಮಾಡುವವರಿಗೆ ಪೊಲೀಸ್‌ರು ಪಾಸ್‌ಗಳನ್ನು ನೀಡಿದ್ದಾರೆ. ಇವರನ್ನು ಹೊರತುಪಡಿಸಿ ಅನಾವಶ್ಯಕವಾಗಿ ಜನಸಂಚಾರ ಇರಬಾರದು. ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಪುರಸಭಾ ಮುಖ್ಯಾಧಿಕಾರಿ ಶ್ರೀನಿವಾಸ್, ಕ್ಷೇತ್ರ ಸಮನ್ವಯಾಧಿಕಾರಿ ಎನ್‌.ಶಂಕರಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT