ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಕೋವಿಡ್‌-19 ಸೋಂಕಿತನ ಸಂಪರ್ಕ, 67 ಮಂದಿ ಮೇಲೆ ನಿಗಾ

Last Updated 16 ಏಪ್ರಿಲ್ 2020, 5:54 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಕೋಡಿಪಾಳ್ಯದಲ್ಲಿ 39 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್‌-19 ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ. ಬುಧವಾರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ,ಶಾಸಕ ಟಿ.ವೆಂಕಟರಮಣಯ್ಯ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಜನರ ಸ್ಥಿತಿಗತಿ ಕುರಿತು ಸಮಾಲೋಚನೆ ನಡೆಸಿದರು.

ಈ ಕುರಿತು ಮಾಹಿತಿ ನೀಡಿದ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಕೋಡಿಪಾಳ್ಯದಲ್ಲಿ 39 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟೀವ್ ಕಂಡು ಬಂದಿರುವುದರಿಂದ ಇಡೀ ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ. ಜನರಿಗೆ ಅಗತ್ಯ ವಸ್ತುಗಳು ದೊರೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

‘ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 17 ಮಂದಿಯನ್ನು ಮಧುರೆ ಹೋಬಳಿಯ ಇಸ್ತೂರು ಗ್ರಾಮದ ಸಮೀಪದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಾಗೂ 10 ಮಂದಿಯನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ 10 ಮಂದಿಯ ಪ್ರಯೋಗಾಲಯದ ವರದಿ ನೆಗೆಟೀವ್ ಆಗಿದ್ದು, ಇವರನ್ನೂ ಸಹ ವಸತಿ ಶಾಲೆಯಲ್ಲೇ ಇರಿಸಲಾಗಿದೆ’ ಎಂದರು.

ವಸತಿ ಶಾಲೆಯಲ್ಲಿ ಊಟ, ಶೌಚಾಲಯ, ಪ್ರತ್ಯೇಕ ಹಾಸಿಗೆ ಸೇರಿ ಮೂಲ ಸೌಲಭ್ಯ ಕಲ್ಪಿಸಲಾಗಿದೆ. 30 ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದ್ದು, ಗ್ರಾಮದ ಪ್ರಾಥಮಿಕ ಹಾಗೂ ದ್ವಿತೀಯ ಹಂತದಲ್ಲಿ ಸಂಪರ್ಕದಲ್ಲಿದ್ದ ಒಟ್ಟು 67 ಮಂದಿ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT