ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ ಹೆಚ್ಚಳ

ನೆರಿಗಾ ಗ್ರಾಮಸ್ಥರಲ್ಲಿ ಆತಂಕ: ಕೊರೊನಾ ವಿರುದ್ಧ ಜನ ಜಾಗೃತಿ
Last Updated 29 ಅಕ್ಟೋಬರ್ 2020, 4:32 IST
ಅಕ್ಷರ ಗಾತ್ರ

ಆನೇಕಲ್‌: ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಸವರಾಜು ಮತ್ತು ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದರು.

ಗ್ರಾಮವು ಸುಮಾರು 1,600 ಜನಸಂಖ್ಯೆ ಹೊಂದಿದ್ದು ತಪಾಸಣೆ ನಡೆಸಿದ ಸಂದರ್ಭದಲ್ಲಿ 48 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾದ್ದರಿಂದ ಗ್ರಾಮಸ್ಥರು ಆತಂಕಗೊಂಡು ಮನೆಗಳಿಂದ ಹೊರಬರದೇ ಇದ್ದ ಪರಿಸ್ಥಿತಿ ನಿರ್ಮಾಣವಾಗಿತ್ತು. ‌

ಆರೋಗ್ಯ ಇಲಾಖೆಯ ಸ್ವಾಬ್‌ ಟೆಸ್ಟ್‌ ಮಾಡಿಸಿಕೊಳ್ಳಲು ಒಪ್ಪಿರಲಿಲ್ಲ. ಹಾಗಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಬಸವರಾಜು, ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್‌, ನೋಡೆಲ್‌ ಅಧಿಕಾರಿ ಡಾ.ವೈಷ್ಣವಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೊರೊನಾ ಬಗ್ಗೆ ಭಯ ಬೇಡ. ಸ್ವಚ್ಛತೆ, ಸಾಮಾಜಿಕ ಅಂತರ, ಸ್ಯಾನಿಟೈಜ್‌ ಬಳಕೆ ಸೇರಿದಂತೆ ಮಾರ್ಗಸೂಚಿ ಅನುಸರಿಸುವ ಮೂಲಕ ಸೋಂಕು ತಡೆಯಲು ಶ್ರಮಿಸಬೇಕು ಎಂದು ತಿಳಿಸಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್‌ ಮಾತನಾಡಿ, ‘ಗ್ರಾಮದಲ್ಲಿ ವೈದ್ಯಕೀಯ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ. ಗ್ರಾಮವನ್ನು ಕಂಟೋನ್ಮೆಂಟ್‌ ಝೋನ್‌ ಎಂದು ಘೋಷಿಸಲಾಗಿದೆ. ಪ್ರಾಥಮಿಕ ಸಂಪರ್ಕಿತರು ಮತ್ತು ಸೋಂಕಿನ ಲಕ್ಷಣ ಹೊಂದಿದವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸೋಂಕು ತಡೆಯಬೇಕು. ಅವಶ್ಯಕವಿದ್ದಲ್ಲಿ ಕ್ವಾರೆಂಟೈನ್‌ಗೆ ಒಳಗಾಗಬೇಕು. ಆರೋಗ್ಯ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT