ಬುಧವಾರ, ಮೇ 25, 2022
29 °C

ದೇವನಹಳ್ಳಿ: 34 ಬಿಎಸ್ಎಫ್ ಯೋಧರಿಗೆ ಕೋವಿಡ್‌ -19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಮೇಘಾಲಯದಿಂದ ಕಾರಹಳ್ಳಿ ಬಿ.ಎಸ್.ಎಫ್ ತರಬೇತಿ ಶಿಬಿರಕ್ಕೆ ಬಂದಿದ್ದ 20 ಮಂದಿ ಹಾಗೂ ಯಲಹಂಕ ಶಿಬಿರದಲ್ಲಿ ಪಾಲ್ಗೊಂಡಿದ್ದ14 ಮಂದಿ ಯೋಧರಿಗೆ ಕೋವಿಡ್‌ ದೃಢಪಟ್ಟಿದೆ.

ಸೋಂಕಿತರನ್ನು ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆ ಹಾಗೂ ಯಲಹಂಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ತರಬೇತಿಗಾಗಿ ಮೇಘಾಲಯದಿಂದ 15 ದಿನಗಳ ಹಿಂದೆ ಈ ಯೋಧರು ಬಂದಿದ್ದರು. ದೇವನಹಳ್ಳಿ ಸರ್ಕಾರಿ ಆಸ್ವತ್ರೆಯಲ್ಲಿ 20 ಜನ ಯೋಧರನ್ನು ಐಸೋಲೇಷನ್ ಮಾಡಲಾಗಿದೆ. ಹಾಗೆಯೇ 14 ಮಂದಿ ಸೋಂಕಿತ ಯೋಧರನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಬಿರದ ತರಬೇತಿಯಲ್ಲಿದ್ದ 726 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಅವರ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು