ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಹೆಸರಿನಲ್ಲಿ ಸುಲಿಗೆ ಆರೋಪ: ತನಿಖೆಗೆ ಆಗ್ರಹ

Last Updated 2 ಅಕ್ಟೋಬರ್ 2020, 2:05 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಕೊರೊನಾ ಸೋಂಕು ದೃಢಪಡದಿದ್ದರು ಸಹ ಕೊರೊನಾ ರೀತಿಯ ಚಿಕಿತ್ಸೆ ನೀಡುವ ಮೂಲಕ ನಗರದ ದ್ರುವನಾರಾಯಣ‌ ಎಂಬವವರು ಮೃತಪಡಲು ಕಾರಣವಾಗಿರುವ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕನ್ನಡಿಗರ ಬಣ) ಸಂಸ್ಥಾಪಕ ಅಧ್ಯಕ್ಷ ಬಿ.ಎಸ್‌.ಚಂದ್ರಶೇಖರ್‌ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದ್ರುವನಾರಾಯಣ‌ ಅವರು ಜ್ವರ, ಉಸಿರಾಟದ ತೊಂದರೆ ಎಂದು ಆಸ್ಪತ್ರೆಗೆ ದಾಖಲಾಗಿದ್ದಾಗ ಮಗನಿಂದ ಕೊರೊನಾ ಚಿಕಿತ್ಸೆಗೆ ಅಗತ್ಯ ಇರುವ ಔಷಧಿ, ಚುಚ್ಚು ಮದ್ದನ್ನು ಹೊರಗಿನಿಂದಲೇ ತರಿಸಿಕೊಂಡಿದ್ದಾರೆ. ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲ ದ್ರವ ಪರೀಕ್ಷೆ ಮಾಡಿಸಿದ್ದರು. ಆದರೆ ಪ್ರಯೋಗಾಲಯದಿಂದ ವರದಿ ಬರುವುದು ತಡವಾಗಿ ಜ್ವರ ಬಂದಿದ್ದರಿಂದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ದ್ರುವನಾರಾಯಣ‌ ಅವರ ಗಂಟಲ ದ್ರವದ ಪರೀಕ್ಷಾ ವರದಿಯು ನೆಗೆಟಿವ್‌ ಎಂದು ಬಂದಿದೆ.

ದ್ರುವನಾರಾಯಣ‌ ಅವರ ಮಗ ನಮಗೆ ನೀಡಿದ ದೂರಿನ ಮೇರೆಗೆ ಆಸ್ಪತ್ರೆಯ ವೈದ್ಯರನ್ನು ನಾವು ಪ್ರಶ್ನೆ ಮಾಡಿದಕ್ಕೆ ಹಣ ವಸೂಲಿಯ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ ದಾಖಲಾತಿಯು ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT