ಶುಕ್ರವಾರ, ಜುಲೈ 23, 2021
23 °C

ಮಹಾರಾಷ್ಟ್ರದಿಂದ ಬಂದಿರುವ ವ್ಯಕ್ತಿಗೆ ಕೋವಿಡ್‌-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಬ್ಬ ವ್ಯಕ್ತಿಯಲ್ಲಿ ಇಂದು ಕೋವಿಡ್‌-19 ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ನಿವಾಸಿಯಾದ 29 ವರ್ಷದ ವ್ಯಕ್ತಿ(ಪಿ-3991) ಇವರು ಮಹಾರಾಷ್ಟ್ರ ರಾಜ್ಯದಿಂದ ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇವರನ್ನು ಹೋಟೆಲ್‌ನ ಕ್ವಾರಂಟೈನಲ್ಲಿ ಇರಿಸಲಾಗಿತ್ತು. ಈ ಸಂದರ್ಭದಲ್ಲಿ ನಡೆಸಲಾದ ಆರೋಗ್ಯ ತಪಾಸಣೆಯಲ್ಲಿ ಕೊರೊನಾ ವೈರಸ್‌ ಸೋಂಕು ಇರುವುದು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಯು ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕೊರೊನಾ ಸೋಂಕಿತ ವ್ಯಕ್ತಿ ನಗರದಲ್ಲಿನ ತಮ್ಮ ಮನೆಗೆ ಬಂದಿರಲಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.