ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಪರಿಸ್ಥಿತಿ ನಿಯಂತ್ರಣದಲ್ಲಿ: ಶಾಸಕ

ಹೊಸಕೋಟೆ: ನಿಯಂತ್ರಣ ಕಾರ್ಯಪಡೆ ಅಧಿಕಾರಿಗಳ ಸಭೆ
Last Updated 8 ಆಗಸ್ಟ್ 2020, 4:11 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೆ ಯಾವುದೇ ಸಮಸ್ಯೆಯಿಲ್ಲ. ಆಡಳಿತವು ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ನಡೆದ ಕೊರೊನಾ ಟಾಸ್ಕ್ ಫೋರ್ಸ್‌ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ತಾಲ್ಲೂಕಿನಲ್ಲಿ ಈವರೆಗೆ 571 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ನಗರದಲ್ಲಿಯೇ ಹೆಚ್ಚಿನ ಪ್ರಕರಣ ಕಂಡುಬಂದಿದೆ. ಅವರಲ್ಲಿ 361 ಜನರಿಗೆ ಚಿಕಿತ್ಸೆ ಫಲಕಾರಿಯಾಗಿದ್ದು ಗುಣಮುಖರಾಗಿದ್ದಾರೆ. 50 ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ತಾಲ್ಲೂಕಿನಲ್ಲಿ 27 ಜನ ಕೊರೊನಾದಿಂದ ಸತ್ತಿದ್ದು ಅದರಲ್ಲಿಯೂ ನಗರದಲ್ಲಿ 18 ಮಂದಿ ಹಾಗೂ ಗ್ರಾಮಂತರದಲ್ಲಿ 9 ಮಂದಿ ಸೇರಿದ್ದಾರೆ’ ಎಂದರು.

‘ತಾಲ್ಲೂಕಿನಲ್ಲಿ ಈಗಾಗಲೇ 250ಕ್ಕೂ ಹೆಚ್ಚು ಹಾಸಿಗೆಗಳನ್ನು ಕೊರೊನಾ ಚಿಕಿತ್ಸೆಗಾಗಿ ಮೀಸಲಿಟ್ಟಿದ್ದು ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ. ತಾಲ್ಲೂಕಿನಲ್ಲಿ ಈಗ 1000 ರಾಪಿಡ್ ಪರೀಕ್ಷೆ ಕಿಟ್‌ಗಳು ಇದ್ದು, ಇದರಿಂದ ತ್ವರಿತಗತಿಯಲ್ಲಿ ಕೊರೊನಾ ಪತ್ತೆ ಮಾಡಬಹುದಾಗಿದೆ. ನಗರದಲ್ಲಿ ಎಂಟು ಪ್ರದೇಶಗಳು, ಗ್ರಾಮಾಂತರದಲ್ಲಿ 42 ಗ್ರಾಮಗಳು ಸೀಲ್ ಡೌನ್ ಆಗಿವೆ’ ಎಂದು ತಿಳಿಸಿದರು.

‘ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಪ್ರಥಮ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕಿತ ವ್ಯಕ್ತಿಗಳ ವಿವರ ಪಡೆಯಲು ಶಿಕ್ಷಕರ ಸಹಕಾರ ಬೇಕಾಗಿದ್ದು ಅದಕ್ಕೆ ಸಹಕರಿಸುವಂತೆ ತಾಲ್ಲೂಕು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಶಿಕ್ಷಕರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳೊಂದಿಗೆ ಆರೋಗ್ಯ ಇಲಾಖೆಗೆ ಸಹಕಾರ ನೀಡುವಂತೆ ತಿಳಿಸಲಾಗಿದೆ’ ಎಂದರು.

ಉಪನೋಂದಣಾಧಿಕಾರಿ ಕಚೇರಿಯಲ್ಲಿ ಬಹಳ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನೋಂದಣಾಧಿಕಾರಿಗೆ ಶಾಸಕರು ಸೂಚಿಸಿದರು.

ತಹಶೀಲ್ದಾರ್‌ ಗೀತಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಾಥ್ ಗೌಡ, ತಾಲ್ಲೂಕು ಶಿಕ್ಷಣಾಧಿಕಾರಿ ಕನ್ನಯ್ಯ, ತಾಲ್ಲೂಕು ಸಹ ಆರೋಗ್ಯಾಧಿಕಾರಿ ಡಾ.ಉಮೇಶ್, ಸರ್ಕಾರಿ ಆಸ್ಪತ್ರೆಯ ಡಾ. ಸತೀಶ್, ನಗರಸಭೆ ಆಯುಕ್ತ ಪರಮೇಶ್, ನಗರಸಭೆಯ ಆರೋಗ್ಯಾಧಿಕಾರಿ ಅಖಿಲಾ ಭಾನು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT