ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈನುಗಾರಿಕೆ; ₹ 5 ಪ್ರೋತ್ಸಾಹ ಧನ

ಹೀರೇಕರಪನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟನೆ
Last Updated 8 ಮಾರ್ಚ್ 2018, 9:42 IST
ಅಕ್ಷರ ಗಾತ್ರ

ಬಂಗಾರಪೇಟೆ: ಹೈನೋದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ. ಅಧಿಕಾರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಜನರ ಮನಸಿನಲ್ಲಿ ಉಳಿಯುವಂತಹ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ತಾಲ್ಲೂಕಿನ ಹೀರೇಕರಪನಹಳ್ಳಿ ಗ್ರಾಮದಲ್ಲಿ ಬುಧವಾರ ನೂತನವಾಗಿ ಆರಂಭಿಸಿದ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ 40 ವರ್ಷದಿಂದ ಕಾಣದ ಅಭಿವೃದ್ಧಿಯನ್ನು ಕ್ಷೇತ್ರ ನಾಲ್ಕು ವರ್ಷದಲ್ಲಿ ಕಂಡಿದೆ.‌ ಜಿಲ್ಲೆಯಲ್ಲಿ ಬಹುತೇಕ ರೈತರು ಹೈನೋದ್ಯಮವನ್ನು ಮುಖ್ಯ ಕಸುಬಾಗಿ ನೆಚ್ಚಿಕೊಂಡಿದ್ದಾರೆ. ಹೈನೋದ್ಯಮವನ್ನು ಪ್ರೋತ್ಸಾಹಿಸುವ ಸಲುವಾಗಿ ಸರ್ಕಾರ ಪ್ರತಿ ಲೀಟರ್ ಹಾಲಿಗೆ ₹ 5 ಸಹಾಯಧನ ನೀಡುತ್ತಿದೆ. ಅಲ್ಲದೆ ಸಹಕಾರ ಸಂಘಗಳಲ್ಲಿ ಪಡೆದ ₹ 50ಸಾವಿರದವರೆಗಿನ ರೈತರ ಸಾಲ ಮನ್ನಾ ಮಾಡಿದೆ ಎಂದರು.

ಹಾಲು ಒಕ್ಕೂಟದ ನಿರ್ದೆಶಕರಾಗಿ ಜಯಸಿಂಹ ಕೃಷ್ಣಪ್ಪ ಉತ್ತಮ ಕೆಲಸ ಮಾಡಿದ್ದಾರೆ. ಒಕ್ಕೂಟದ ಚುನಾವಣೆಯಲ್ಲಿ ಅವರು ಯಾವ ಪಕ್ಷದಲ್ಲಿ ಸ್ಪರ್ಧಿಸಿದರೂ ಅವರನ್ನು ಬೆಂಬಲಿಸುವುದಾಗಿ ಶಾಸಕರು ಭರವಸೆ ನೀಡಿದರು.

ಜಯಸಿಂಹ ಕೃಷ್ಣಪ್ಪ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿಗೆ ನಿರ್ದೇಶಕರ ಇಚ್ಛಾಶಕ್ತಿ ಅಗತ್ಯ. ಸಂಘಗಳಲ್ಲಿ ಯಾವುದೇ ರಾಜಕೀಯ ಮಾಡದೆ ಅಭಿವೃದ್ಧಿಗೆ ಮುಂದಾಗಿರುವುದರಿಂದ ಹೈನೋದ್ಯಮ ಇಲ್ಲಿ ಮುಖ್ಯ ಕಸುಬಾಗಿ ರೂಪಗೊಂಡಿದೆ ಎಂದರು.

ಗುಣಮಟ್ಟದ ಹಾಲು ಪೂರೈಕೆಯಲ್ಲಿ ತಾಲ್ಲೂಕು ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದೆ ಇದಕ್ಕೆ ಚ್ಯುತಿ ಬಾರದಂತೆ ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ರೈತರು ಹಾಗೂ ಸಂಘದ ಪದಾಧಿಕಾರಿಗಳದ್ದು ಎಂದು ಹೇಳಿದರು.

ಹಾಲು ಸಹಕಾರ ಸಂಘದ ಅಧ್ಯಕ್ಷ ಭೀಮಣ್ಣ, ಸದಸ್ಯರಾದ ಎಂ.ರಾಮಪ್ಪ, ಯಲ್ಲಪ್ಪ, ಭವಾನಿ, ಮುಖಂಡರಾದ ಹೂವರಸನಹಳ್ಳಿ ರಾಜಪ್ಪ, ಚಿನ್ನಿವೆಂಕಟೇಶ್, ಕಾರ್ಯದರ್ಶಿ ಬಾಬು, ವಿಸ್ತರಣಾಧಿಕಾರಿ ವೇಣುಗೋಪಾಲ್, ಚಂದ್ರಶೇಖರರಾಜು, ಸಿದ್ದನಹಳ್ಳಿ ನಾಗರಾಜ್, ಕಪಾಲಿ ಶಂಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT