ದೊಡ್ಡಬಳ್ಳಾಪುರ: ನಾಲ್ಕು ಕಾರ್ಮಿಕ ಸಂಹಿತೆ ರದ್ದು ಹಾಗೂ ಕೇಂದ್ರ, ರಾಜ್ಯದ ಸರ್ಕಾರಗಳ ಜನ ವಿರೋಧಿ ಕಾನೂನುಗಳನ್ನು ಖಂಡಿಸಿ, ಹಕ್ಕೊತ್ತಾಯ ಈಡೇರಿಸುವಂತೆ ಆಗರಹಿಸಲು ಸಿಪಿಐಎಂ ಡಿ.21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನ ಬಹಿರಂಗ ಸಭೆ ಹಮ್ಮಿಕೊಂಡಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ಹಾಗೂ ಜನವಿರೋಧಿ ಕಾನೂನು ರೂಪಿಸಿವೆ. ಇದರಿಂದ ಸಾಮಾನ್ಯ ಜನತೆ ಸವಲತ್ತಿಗೆ ಹೋರಾಟ ಮಾಡಬೇಕಿದೆ. ಇದರ ವಿರುದ್ದ ಸಿಪಿಐಎಂ ರಾಜ್ಯದಾದ್ಯಂತ ಜನಾಂದೋಲನ ಅಭಿಯಾನ ಹಮ್ಮಿಕೊಂಡಿದೆ. 20 ಹಕ್ಕೊತಾಯಗಳನ್ನು ಈಡೇರಿಸುವಂತೆ ಸಭೆಯಲ್ಲಿ ಆಗ್ರಹಿಸಲಾಗುವುದು ಎಂದು ಸಿಪಿಐಎಂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಸಿ. ನರಸಿಂಹಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ತಿಳಿದರು.

ನವೆಂಬರ್ 1 ರಿಂದ ಡಿ.15 ರವರೆಗೆ ಜನಾಂದೋಲನ ನಡೆಸಿ ರಾಜ್ಯದಾದ್ಯಂತ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಆಧಾರಿಸಿ 20 ಹಕ್ಕೊತ್ತಾಯ ಸಿದ್ಧಪಡಿಸಲಾಗಿದೆ. ಇದನ್ನು ಸಭೆಯಲ್ಲಿ ಮಂಡಿಸಲಾಗುವುದು ಎಂದರು.

ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸರ್ಕಾರದಲ್ಲಿ ಸಿಬಿಐ, ಆದಾಯ ತೆರಿಗೆ ಇಲಾಖೆ, ಇ.ಡಿ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೃಷಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತಂದು ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಜನ ಜೀವನ ದುಸ್ತರವಾಗಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಪಿಐಎಂ ಈ ದಿಸೆಯಲ್ಲಿ ಬೃಹತ್ ಹೋರಾಟ ನಡೆಸುತ್ತಿದ್ದು, ಕೃಷಿ ಬಿಕ್ಕಟ್ಟು, ಕಾರ್ಮಿಕರ ಸಂಹಿತೆ ಹಿಂಪಡೆಯುವುದು ಸೇರಿದಂತೆ 20 ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಬಹಿರಂಗ ಸಭೆ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಭಾಗವಹಿಸಲು ನಮ್ಮ ಜಿಲ್ಲೆಯಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂದರು.

ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ಎಸ್.ರುದ್ರಾರಾಧ್ಯ ಮಾತನಾಡಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಅವೈಜ್ಞಾನಿಕವಾಗಿದೆ. ಇದರಿಂದ ಕೂಲಿ ಕಾರ್ಮಿಕರಿಗೆ, ವಲಸೆ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳಲಿದ್ದಾರೆ. ಸಂವಿಧಾನ ವಿರೋಧಿ ನಿಲುವು ತಾಳುವ ಸರ್ಕಾರಗಳ ವಿರುದ್ದ ದನಿ ಎತ್ತಬೇಕಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಪಿ.ಎ.ವೆಂಕಟೇಶ್, ಪ್ರಭಾ ಬೆಳವಂಗಲ ಇದ್ದರು.

ಉತ್ಪಾದನಾ ವೆಚ್ಚ ಒಳಗೊಂಡದೆ ಕನಿಷ್ಠ ಬೆಂಬಲ ಬೆಲೆ ನೀಡಿ

ರಾಜ್ಯದ ಎಲ್ಲಾ ಬೆಳೆಗಳಿಗೆ ಒಟ್ಟಾರೆ ಉತ್ಪಾದನಾ ವೆಚ್ಚಕ್ಕೆ ಶೇ.50 ಲಾಭಾಂಶ ಸೇರಿಸಿ ಕನಿಷ್ಠಬೆಂಬಲ ಬೆಲೆ ಕಾಯ್ದೆ ಜಾರಿ ಮಾಡಬೇಕೆಂದು ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಆರ್.ಚಂದ್ರ ತೇಜಸ್ವಿ ಒತ್ತಾಯಿಸಿದರು. ರೈತಾಧಾರಿತ ಕೃಷಿ ರಕ್ಷಿಸಬೇಕು. ಕಾರ್ಪೊರೇಟ್ ಲಾಭದ ಕೃಷಿ ಕೈಬಿಡಬೇಕು ಬಲವಂತದ ಅನಗತ್ಯವಾದ ಭೂಸ್ವಾಧೀನ ನಿಲ್ಲಿಸಬೇಕು. ಬಿಜೆಪಿ ಸರ್ಕಾರದ ಕಾಲದಲ್ಲಿ ಜಾರಿಗೊಳಿಸಿದ ಭೂಸುಧಾರಣಾ ತಿದ್ದುಪಡಿ ಕಾಯ್ದೆ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ರೈತರ ಭೂಮಿಯನ್ನು ರಕ್ಷಿಸಬೇಕು. ಬಡವರಿಗೆ ದಲಿತರಿಗೆ ಭೂಮಿಗಳನ್ನು ನೀಡಬೇಕು. ಬಗರ್ ಹುಕುಂ ಮತ್ತು ಅರಣ್ಯ ಸಾಗುವಳಿ ಭೂಮಿಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು. ಬೆಂಗಳೂರಿನ ಸುತ್ತಮುತ್ತ ವಿವಿಧ ಉದ್ದೇಶಗಳಿಗೆ ಕೈಗಾರಿಕಾ ಅಭಿವೃದ್ಧಿ ಹೆಸರಿನಲ್ಲಿ ರೈತರ ಒಪ್ಪಿಗೆ ಇಲ್ಲದೆ ನಡೆಯುತ್ತಿರುವ ಬಲವಂತದ ಭೂಸ್ವಾಧೀನ ಕೂಡಲೇ ನಿಲ್ಲಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.