ಸೋಮವಾರ, ಅಕ್ಟೋಬರ್ 3, 2022
23 °C

ಗೋಮಾಂಸ ಇದ್ದ ಬೈಕ್‌ಗೆ ಜನರ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಶೆಟ್ಟಿಹಳ್ಳಿ (ದೊಡ್ಡಬಳ್ಳಾಪುರ): ಬಾಶೆಟ್ಟಿಹಳ್ಳಿ ಬಳಿ ಶುಕ್ರವಾರ ರಾತ್ರಿ ಗೋಮಾಂಸ ಕೊಂಡೊಯ್ಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಜನರು ಬೆಂಕಿ ಹಚ್ಚಿದ್ದಾರೆ. ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಬಾಶೆಟ್ಟಿಹಳ್ಳಿ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸವಾರ ಆಯತಪ್ಪಿ ಬಿದ್ದ. ಈ ವೇಳೆ ಚೀಲದಲ್ಲಿದ್ದ ಗೋಮಾಂಸ ರಸ್ತೆಯಲ್ಲಿ ಬಿದ್ದಿದೆ. ಇದನ್ನು ಕಂಡ ಸಾರ್ವಜನಿಕರು ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ.

ಬಂಧಿತನನ್ನು ಹಿಂದೂಪುರ ಮೂಲದ ಅಸ್ಲಂ ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು