ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್‌ ಭಾಗದಲ್ಲಿ ಅಪರಾಧ ಹೆಚ್ಚಳ

ದೂರುದಾರರ ಸಭೆಯಲ್ಲಿ ಎಡಿಜಿಪಿ l ನೊಂದವರ ಅಹವಾಲು ಆಲಿಸಿದ ಪೊಲೀಸ್‌ ಅಧಿಕಾರಿಗಳು
Last Updated 8 ಜನವರಿ 2023, 6:00 IST
ಅಕ್ಷರ ಗಾತ್ರ

ಆನೇಕಲ್ : ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ನೊಂದವರ ದಿನ ಶನಿವಾರ ಆಯೋಜಿಸಲಾಗಿತ್ತು. ದೂರುದಾರರ ಮತ್ತು ನೊಂದವರ ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್‌ ಕುಮಾರ್‌ ಮತ್ತು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಅವರು ನೊಂದವರ ಸಮಸ್ಯೆ ಆಲಿಸಿದರು.

ಎಡಿಜಿಪಿ ಅಲೋಕ್‌ ಕುಮಾರ್‌ ಮಾತನಾಡಿ, ‘ಆನೇಕಲ್‌ ಪೊಲೀಸ್‌ ಉಪವಿಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪರಾಧಗಳ ರಾಜಧಾನಿಯಾಗುತ್ತಿದೆ. ಹಾಗಾಗಿ ಈ ಭಾಗದಲ್ಲಿ ಶಾಂತಿ ಮೂಡಿಸುವುದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸಬೇಕು. ಇದಕ್ಕಾಗಿ ಪ್ರತಿ ತಿಂಗಳ ಮೂರನೇ ಭಾನುವಾರ ನೊಂದವರ ಸಭೆ ಮಾಡಬೇಕು’ ಎಂದು ಸೂಚಿಸಿದರು.

ಸಮಾಜದಲ್ಲಿ ಶಾಂತಿ ಮೂಡಿಸುವುದು, ಜನರ ಜೀವ ಮತ್ತು ಆಸ್ತಿ ರಕ್ಷಣೆ ಪೊಲೀಸ್‌ ಇಲಾಖೆಯ ಜವಬ್ದಾರಿಯಾಗಿದೆ. ಸಾರ್ವಜನಿಕರು ಭಯ ರಹಿತವಾಗಿ ಬದುಕುಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಅಪರಾಧಿಗೆ ಶಿಕ್ಷೆಯಾಗಬೇಕು. ಹಾಗಾಗಿ ನೊಂದವರು ಮತ್ತು ದೂರುದಾರರು ನ್ಯಾಯಾಲಯದಲ್ಲಿ ಸತ್ಯ ಹೇಳಬೇಕು. ರಾಜಿಯಾಗದೆ ನ್ಯಾಯ ಕೇಳಿದಾಗ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುತ್ತದೆ. ಜನಸ್ನೇಹಿಯಾಗಿ ಪೊಲೀಸರು ಕಾರ್ಯನಿರ್ವಹಿಸಬೇಕು. ನೊಂದವರಿಗೆ ಮತ್ತು ಅಶಕ್ತರಿಗೆ ಭರವಸೆಯಾಗುವಂತೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕ ಭೇಟಿ ವಿವರದ ಪುಸ್ತಕವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ನೊಂದವರ ಸಭೆಯಲ್ಲಿ ಆರೋಪಿಗಳಿಂದ ಬೆದರಿಕೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ತಿಳಿಸಿದ್ದಾರೆ. ಹಾಗಾಗಿ ಅವರ ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು.

ಗಾಂಜಾ ಹಾವಳಿ ಹೆಚ್ಚಾಗುತ್ತಿರುವುದರಿಂದ ಹಳೆಯ ಪ್ರಕರಣಗಳನ್ನು ವಿಶ್ಲೇಷಿಸಿ ಆರೋಪಿಗಳ ಪತ್ತೆ ಮಾಡಬೇಕು. ಸಕಾಲಕ್ಕೆ ಬಾರ್‌ ಮತ್ತು ವೈನ್‌ ಸ್ಟೋರ್‌ಗಳನ್ನು ಮುಚ್ಚಬೇಕು. ಇಲ್ಲವಾದಲ್ಲಿ ಕಾನೂನು ರೀತಿಯ ಕ್ರಮಗಳನ್ನು ಜರುಗಿಸಬೇಕು ಎಂದು ಸೂಚಿಸಿದರು.

ಇನ್ನೂ ನಾಲ್ಕೈದು ತಿಂಗಳಲ್ಲಿ ವಿಧಾನಸಭೆಯ ಚುನಾವಣೆ ಎದುರಾಗಲಿದ್ದು, ಶಾಂತಿಯುತವಾಗಿ ನಿರ್ವಹಿಸಲು ಪೊಲೀಸ್‌ ಇಲಾಖೆ ಸಜ್ಜಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿದರು.

ಈಗಾಗಲೆ ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಚುನಾವಣಾ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯನ್ನು ಸಜ್ಜುಗೊಳಿಸಲಾಗುತ್ತಿದೆ. ಈ ಹಿಂದೆ ನಡೆದಿರುವ ರಾಜಕೀಯ ಕೊಲೆಗಳು, ಗಂಭೀರ ಪ್ರಕರಣಗಳನ್ನು ತಿಳಿದು ಆನೇಕಲ್‌ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಎಲ್ಲಾ ಪೊಲೀಸ್‌ ಠಾಣೆಗಳ ಇನ್‌ಸ್ಪೆಕ್ಟರ್‌ ಬಳಿ ಮಾಹಿತಿ ಪಡೆಯಲಾಗಿದೆ. ಆನೇಕಲ್‌ ಉಪವಿಭಾಗವು ನಗ

ಮಾತಿಗೆ ಬಗ್ಗದವರು ಗಡಿಪಾರು

ಆನೇಕಲ್‌ ಪಟ್ಟಣದಲ್ಲಿ ಪೊಲೀಸ್‌ ಪೇದೆಯೊಬ್ಬರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಪೊಲೀಸರು ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಮಾತಿಗೆ ಬಗ್ಗದವರ ವಿರುದ್ಧ ಗೂಂಡಾ ಕಾಯ್ದೆ, ಗಡಿಪಾರು ಮಾಡಲಾಗುವುದು ಎಂದು ಅಲೋಕ್‌ ಕುಮಾರ್‌ ಎಚ್ಚರಿಕೆ ನೀಡಿದರು.

ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ಪುರುಷೋತ್ತಮ್‌, ಡಿವೈಎಸ್ಪಿಗಳಾದ ಲಕ್ಷ್ಮೀನಾರಾಯಣ್‌, ಗೌತಮ್‌, ಸರ್ಕಲ್ ಇನ್‌ಸ್ಪೆಕ್ಟರ್‌ಗಳಾದ ಕೆ.ವಿಶ್ವನಾಥ್‌, ಚಂದ್ರಪ್ಪ, ಸುದರ್ಶನ್‌, ಜಗದೀಶ್, ಉಮಾಮಹೇಶ್, ಮಂಜುನಾಥ್‌, ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT