ವಿಜಯಪುರ:ದೇಶದಲ್ಲಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಸಾಧನೆ ಮಾಡಿದೆ ಎಂದು ವಿರೋಧ ಪಕ್ಷದ ನಾಯಕರು ಪ್ರಶ್ನಿಸುತ್ತಿದ್ದಾರೆ. ಕಾಂಗ್ರೆಸ್ ಈ ದೇಶದಲ್ಲಿ ಸಂವಿಧಾನ ಉಳಿಸಿರುವುದರಿಂದಲೇ ಬಡ ಕುಟುಂಬದಲ್ಲಿ ಹುಟ್ಟಿದ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಮಾಜಿ ಶಾಸಕ ಕೆ. ವೆಂಕಟಸ್ವಾಮಿ ಹೇಳಿದರು.

ಚನ್ನರಾಯಪಟ್ಟಣ ಹೋಬಳಿಯ ಜೊನ್ನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು
ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ. ಲಕ್ಷ್ಮೀನಾರಾಯಣಪ್ಪ ಮಾತನಾಡಿ, ಬಡತನ ತೊಲಗದೇ ದೇಶದ ಉದ್ಧಾರ ಸಾಧ್ಯವಿಲ್ಲ. ನರೇಂದ್ರ ಮೋದಿ ಯುವಜನರಿಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಅದು ಹುಸಿಯಾಗಿದ್ದು, ಅವರು ಜಾರಿಗೆ ತಂದ ಜಿಎಸ್ಟಿ ಹಾಗೂ ನೋಟು ಅಮಾನ್ಯೀಕರಣ ನೀತಿಯ ಪರಿಣಾಮ ದೇಶ ಅಧೋಗತಿಗೆ ಇಳಿದಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಮುಖಂಡ ಚನ್ನಹಳ್ಳಿ ರಾಜಣ್ಣ ಮಾತನಾಡಿ, ಬಿಜೆಪಿಯವರು ಯೋಜನೆಗಳನ್ನು ನೀಡುವ ಬದಲು ಭಾವನಾತ್ಮಕ ವಿಚಾರಗಳ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆ. ಕಾಂಗ್ರೆಸ್ ಜಾತಿ, ಧರ್ಮದ ಹೆಸರಿನಲ್ಲಿ ಮತ ಕೇಳುವುದಿಲ್ಲ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ರಾಮಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಸಿ. ಮಂಜುನಾಥ್ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಜಗನ್ನಾಥ್, ಎಸ್.ಆರ್. ರವಿಕುಮಾರ್, ಚಿನ್ನಪ್ಪ, ಬಿ. ಚೇತನ್ ಗೌಡ, ಕೆ. ಲಕ್ಷ್ಮಣಗೌಡ, ಕೆ. ಶ್ರೀನಿವಾಸಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.