ದೇವನಹಳ್ಳಿ: ಜಿಲ್ಲೆಯಲ್ಲಿ ಈ ಸಾಲಿನ ಬೆಳೆ ಸಮೀಕ್ಷೆ ಆರಂಭಗೊಳ್ಳುತ್ತಿದ್ದು, ಸಮೀಕ್ಷೆಯು ಸರಿಯಾದ ಕ್ರಮದಲ್ಲಿ ಆಗಬೇಕಿದೆ. ಸಮೀಕ್ಷೆ ಮಾಡುವವರಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿಸಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ, ಎಣ್ಣೆಕಾಳು ಅಭಿಯಾನ ಯೋಜನೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡಿದರು.

ಮೊಬೈಲ್ ಅಪ್ಲಿಕೇಶನ್ನಲ್ಲಿ ಸಮೀಕ್ಷೆ ನಡೆಸಿ ನಿಖರ ಅಂಕಿ ಅಂಕಿ–ಅಂಶಗಳ ಕ್ರೂಡಿಕರಣ ಮಾಡಬೇಕು. ಬೆಳೆ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಮುಂತಾದ ಸೌಲಭ್ಯ ಒದಗಿಸಲು ಬಳಸಲಿದೆ. ಆದ್ದರಿಂದ ಬೆಳೆ ಸಮೀಕ್ಷೆ ನಿಖರವಾಗಿ ಇರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಮುಂತಾದ ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ. ಹಾಗಾಗಿ ಅಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಿ ಎಂದರು.

ರೈತರಿಗೆ ಕೃಷಿ ಕಾರ್ಯಾಗಾರ ಆಯೋಜಿಸಿ ರೋಗ ಬಾಧೆಯಿಂದ ಬೆಳೆಯ ರಕ್ಷಣೆ, ಗೊಬ್ಬರ ಪೂರೈಕೆ, ಇಳುವರಿ ಹೆಚ್ಚಿಸುವ ಬೆಳೆಗಳ ಕುರಿತು ಮಾಹಿತಿ ನೀಡಿ. ಸಿರಿಧಾನ್ಯ, ಎಣ್ಣೆ ಕಾಳುಗಳ ಬೆಳೆಗೆ ಹೆಚ್ಚಿನ ಪ್ರೊತ್ಸಾಹ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಂಟಿ ಕೃಷಿ ನಿರ್ದೇಶಕಿ ಬಿ.ಜಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗುಣವಂತ ಜೆ, ರೇಷ್ಮೆ ಇಲಾಖೆ ಉಪನಿರ್ದೇಶಕ ಲಕ್ಷಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.