ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಕೋಟೆ: ಚಿಗುರು ಉತ್ಸವ

Published 28 ಜನವರಿ 2024, 14:05 IST
Last Updated 28 ಜನವರಿ 2024, 14:05 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ಕಸಬಾ ಹೋಬಳಿಯ ಉಪ್ಪಾರಹಳ್ಳಿಯ ಎಂವಿಕೆ ಇಂಟರ್ ನ್ಯಾಶನಲ್ ಶಾಲೆಯ 2ನೇ ವರ್ಷದ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸಂಗಮದ ಚಿಗುರು ಉತ್ಸವ ನಡೆಯಿತು.

ಕಾರ್ಯಕ್ರಮದ ಉದ್ಘಾಟಿಸಿದ ತಹಶೀಲ್ದಾರ್ ವಿಜಯ್ ಕುಮಾರ್ ಮಾತನಾಡಿ, ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ತನ್ನ ಇಚ್ಚೆಯಂತೆ ಭವಿಷ್ಯ ರೂಪಿಸಿಕೊಳ್ಳಲು ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುವ ಸಂಗತಿಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿವೆ. ಈ ಬಗ್ಗೆ ಪೋಷಕರು ಎಚ್ಚರಿಕೆವಹಿಸಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಮಾತನಾಡಿದರು.

ನಿವೃತ್ತ ಯೋಧ ಶ್ರೀನಿವಾಸ್, ಶಾಲೆಯ ಅಧ್ಯಕ್ಷ ಸಿ.ಮುನಿಯಪ್ಪ, ಕಾರ್ಯದರ್ಶಿ ಕಲಾವತಿ, ನಿರ್ದೇಶಕರಾದ ನಾರಾಯಣಸ್ವಾಮಿ, ಶಾರದಾಶ್ರಮದ ಮಾತಾಜಿ, ಸೀಬರ್ಡ್ ಶಾಲೆಯ ಅಧ್ಯಕ್ಷೆ ಅಮೀನಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT