ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್, ಶಾಲೆಗೆ ಸಿಇಒ ಭೇಟಿ

Last Updated 4 ಜುಲೈ 2019, 20:28 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲತಾ ಅವರು ದಾಬಸ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ನರಸೀಪುರ ತೋಪಿನಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಗುರುವಾರ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದರು.

ಮೊದಲಿಗೆ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳು, ಕಾರ್ಯನಿರ್ವಹಣೆ ಬಗ್ಗೆ ತಿಳಿದುಕೊಂಡರು. ಕಟ್ಟಡ ಕಾಮಗಾರಿಯ ಕುರಿತ ಸಮಸ್ಯೆಗಳ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ನಂಜುಂಡಯ್ಯ ಅವರೊಂದಿಗೆ ಚರ್ಚಿಸಿದರು.

ಶಾಲೆಗೆ ಭೇಟಿ ನೀಡಿ 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಾಮರ್ಥ್ಯವನ್ನು ಸ್ವತಃ ತಾವೇ ಪುಸ್ತಕ ಹಿಡಿದು ಪರೀಕ್ಷೆಗೊಳಪಡಿಸಿದರು. ಸುತ್ತಮುತ್ತ ಯಾವುದೇ ಸರ್ಕಾರಿ ಪ್ರೌಢಶಾಲೆ ಇಲ್ಲದೆ ಹೆಣ್ಣು ಮಕ್ಕಳಿಗೆ ಅನಾನುಕೂಲ ಆಗುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು. ಶಾಲೆ ಹೋಬಳಿ ಕೇಂದ್ರದಲ್ಲಿರುವುದರಿಂದ ಇಲ್ಲಿ ಒಂದನೇ ತರಗತಿಯಿಂದಲೇ ಇಂಗ್ಲಿಷ್‌ ಮಾಧ್ಯಮ ಪ್ರಾರಂಭಿಸುವ ಮತ್ತು ಪ್ರೌಢಶಾಲೆಯಾಗಿ ಉನ್ನತೀಕರಿಸುವ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT