ಆನೇಕಲ್:  ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ಪದಾಧಿಕಾರಿಗಳಿಗೆ ಅಂಬೇಡ್ಕರ್ ಅವರ ತತ್ವ ಚಿಂತನೆಗಳನ್ನು ತಿಳಿಸುವ ಸಲುವಾಗಿ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರವನ್ನು ಸೆ.15-17ರವರೆಗೆ ತಾಲ್ಲೂಕಿನ ಬನ್ನೇರುಘಟ್ಟದ ರಂಗನಾಥ ಕಲ್ಯಾಣ ಮಂಟಪದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಟಿ.ಸಂಪಂಗಿರಾಮ್ ತಿಳಿಸಿದರು.

ಬನ್ನೇರುಘಟ್ಟದಲ್ಲಿ ಶಿಬಿರದ ಮಾಹಿತಿ ಪುಸ್ತಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಅಧ್ಯಯನ ಶಿಬಿರದಲ್ಲಿ ರಾಜ್ಯದ ವಿವಿಧೆಡೆಯಿಂದ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಮೂರು ದಿನಗಳ ಶಿಬಿರದಲ್ಲಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಮಂತ್ರಗಳಿಗೆ ಆದ್ಯತೆ ನೀಡಲಾಗಿದೆ. ಸಮ ಸಮಾಜದ ನಿರ್ಮಾಣ, ಶಿಸ್ತು, ಸಂವಿಧಾನ ಮೌಲ್ಯಗಳ ಬಗ್ಗೆ ತರಬೇತಿ ನೀಡಲಾಗುವುದು. ಯುವ ನಾಯಕತ್ವ ಮತ್ತು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ಮಾಹಿತಿಯನ್ನು ಪದಾಧಿಕಾರಿಗಳ ಅಧ್ಯಯನ ಶಿಬಿರದಲ್ಲಿ ಮಾಹಿತಿ ನೀಡಲಾಗುವುದು. ರಾಜ್ಯದ ವಿವಿಧೆಡೆಯಿಂದ ತಜ್ಞರು, ಚಿಂತಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಮಾರಗೊಂಡನಹಳ್ಳಿ ದಶರಥ್, ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರದಲ್ಲಿ ಪದಾಧಿಕಾರಿಗಳಿಗೆ ಸಂಘಟನೆಯ ಮಹತ್ವವನ್ನು ತಿಳಿಸಲಾಗುವುದು. ಚಿಂತಕರು, ಭಂತೇಜಿಗಳು, ಹೋರಾಟಗಾರರು, ಲೇಖಕರು ಶಿಬಿರದಲ್ಲಿ ತಮ್ಮ ಅನುಭವಗಳನ್ನು ತಿಳಿಸಿದ್ದಾರೆ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಮಿತಿ ಸದಸ್ಯ ಜಿಗಳ ಶ್ರೀರಾಮ್, ಮುಖಂಡರಾದ ಮಂಜುನಾಥ್, ಅಯ್ಯಪ್ಪ, ಬಾಲಯ್ಯ, ವಸೀಂ, ತಂಗರಾಜ್, ನಾಗರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.