ದಲಿತರು ಮತಗಳಿಕೆಗಾಗಿ ಸೀಮಿತ: ಆಕ್ರೋಶ

7

ದಲಿತರು ಮತಗಳಿಕೆಗಾಗಿ ಸೀಮಿತ: ಆಕ್ರೋಶ

Published:
Updated:
Prajavani

ದೇವನಹಳ್ಳಿ: ಆಡಳಿತ ನಡೆಸುವ ಸರ್ಕಾರಗಳು ಚುನಾವಣೆ ಸಂದರ್ಭದಲ್ಲಿ ದಲಿತರನ್ನು ಮತಗಳಿಕೆಗಾಗಿ ಮಾತ್ರ ಬಳಸಿಕೊಳ್ಳುತ್ತಿವೆ ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿಜ್ಜವಾರ ನಾಗರಾಜ್ ಆರೋಪಿಸಿದರು.

ಇಲ್ಲಿನ ಶ್ಯಾನಪ್ಪನಹಳ್ಳಿ ಗ್ರಾಮದಲ್ಲಿ ಪ್ರಜಾ ವಿಮೋಚನಾ ಬಹುಜನ ಸಮಿತಿ ಗ್ರಾಮ ಶಾಖೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅನಕ್ಷರಸ್ಥ ದಲಿತರಿಗೆ ಚುನಾವಣೆ ಸಂದರ್ಭದಲ್ಲಿ ಹಣ, ಮದ್ಯ, ಸೀರೆ ವಿವಿಧ ಉಡುಗೊರೆ ನೀಡಿ ನಯವಾಗಿ ಮತ ಪಡೆಯುತ್ತಾರೆ. ಆಯ್ಕೆಗೊಂಡ ನಂತರ ಅವರಿಗೆ ಅಗತ್ಯವಿರುವ ಮೂಲ ಸೌಲಭ್ಯ ನೀಡುವುದಿಲ್ಲ. ಕನಿಷ್ಠ ದಲಿತರ ಕಾಲೊನಿಗಳ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಹುಜನ ಸಮಿತಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚನ್ನಗಿರಿಯಪ್ಪ, ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಮುನಿಕೃಷ್ಣ, ಜಿಲ್ಲಾ ಯುವ ಘಟಕ ಅಧ್ಯಕ್ಷ ಸಂತೋಷ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಅನ್ನಪೂರ್ಣ, ತಾಲ್ಲೂಕು ಘಟಕ ಸಂಘಟನಾ ಕಾರ್ಯದರ್ಶಿಗಳಾದ ನಾಗರಾಜು, ಸುರೇಶ್, ಗ್ರಾಮ ಪಂಚಾಯಿತಿ ಸದಸ್ಯ ಆನಂದ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !