ಗುರುವಾರ , ಜೂಲೈ 2, 2020
27 °C
DODDABALLAPUR

ಘಾಟಿ ದೇಗುಲದಲ್ಲಿ ದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಚ್ಚಿದ್ದ ತಾಲ್ಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ ಜೂ8ರಂದು ತೆರೆಯಲಾಗುತ್ತಿದೆ. ಸರ್ಕಾರದ ಮಾರ್ಗ ಸೂಚಿಗಳನ್ನು ಭಕ್ತಾದಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.

ಭಾನುವಾರ ದೇವಾಲಯವನ್ನು ಸಂಪೂರ್ಣ ಸ್ವಚ್ಛಗೊಳಿಸಲಾಯಿತು. ಸೋಮವಾರ ಭಕ್ತಾದಿಗಳು ಬಂದಾಗ ದೇವಾಲಯದಲ್ಲಿ ಕಡ್ಡಾಯವಾಗಿ ಅಂತರ ಕಾಪಾಡುವುದು, ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಲಾಗುವುದು. ಅನ್ನದಾಸೋಹ ಭವನದಲ್ಲಿ ಉಪಾಹಾರ ನೀಡುವ ಕುರಿತು ಇನ್ನೂ ತೀರ್ಮಾನ ಕೈಗೊಂಡಿಲ್ಲ.

ಬೆಳಿಗ್ಗೆ 6.30ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಅಭಿಷೇಕದ ವೇಳೆ ದೇವಾಲಯದ ಒಳಗೆ ಕುಳಿತುಕೊಳ್ಳಲು ಅವಕಾಶ ಇರುವುದಿಲ್ಲ. ಭಕ್ತಾದಿಗಳಿಗೆ ತೀರ್ಥ, ಪ್ರಸಾದ ನೀಡುವುದಿಲ್ಲ ಎಂದು ದೇವಾಲಯದ ಪ್ರಧಾನ ಅರ್ಚಕ ಗುರುರಾಜ ಶರ್ಮ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು