ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡಹಳ್ಳಿ ಗ್ರಾಮಸ್ಥರ ಮೇಲೆ ಪೊಲೀಸರ ಹಲ್ಲೆ ಎಸ್‌ಪಿ, ಗೃಹ ಸಚಿವರಿಗೆ ದಸಂಸ ದೂರು

Published 3 ಫೆಬ್ರುವರಿ 2024, 16:17 IST
Last Updated 3 ಫೆಬ್ರುವರಿ 2024, 16:17 IST
ಅಕ್ಷರ ಗಾತ್ರ

ಹೊಸಕೋಟೆ: ತಮ್ಮ ಗ್ರಾಮದಲ್ಲಿರುವ ಬಾರ್‌ ತೆರವುಗೊಳಿಸುವಂತೆ ಒತ್ತಾಯಿಸಿ ಹೋರಾಟ ನಡೆಸಿದ ಬಂಡಹಳ್ಳಿ ಗ್ರಾಮಸ್ಥರ ಮೇಲೆ ನಂದಗುಡಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಪೊಲೀಸರ ವಿರುದ್ದ ಕ್ರಮ ಜರುಗಿಸುವಂತೆ ಭೀಮ್ ಸೇವಾ ಸಮಿತಿಯ ಪದಾಧಿಕಾರಿಗಳು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ದೂರು ಸಲ್ಲಸಿದರು.

ತಾಲ್ಲೂಕಿನ ನಂದಗುಡಿ ಹೋಬಳಿಯ ಹೆತ್ತಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡಹಳ್ಳಿ ಗ್ರಾಮದಲ್ಲಿರುವ ಬಾರ್‌ ತೆರವುಗೊಳಿಸುವಂತೆ ತೆರವುಗೊಳಿಸುವಂತೆ ಒತ್ತಾಯಿಸಿ ಫೆ.2ರಂದು ದಲಿತ ಸಂಘಟನೆಗಳೊಂದಿಗೆ ಬಂಡಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ಬಳಿಕ ಪೊಲೀಸ್ ಠಾಣೆಯ ಬಳಿ ಇದ್ದ ಗ್ರಾಮಸ್ಥರನ್ನು ನಂದಗುಡಿ ಪೊಲಿಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮನಬಂದಂತೆ ಥಳಿಸಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಭೀಮ್ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್, ವೈಎಸ್‌ಎಸ್ ಸಾಮ್ರಾಟ್ ಸುಬ್ಬು, ಅಹಿಂದ ಕಿರಣ್, ಜಿಲ್ಲಾ ಆಟೊ ಘಟಕದ ಅಧ್ಯಕ್ಷ ಶ್ರೀನಾಥ್ ಇದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT