ದೇವನಹಳ್ಳಿ: ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಸೊಳ್ಳೆಗಳ ಉತ್ಪತ್ತಿಯೊಂದಿಗೆಸಾಂಕ್ರಾಮಿಕ ರೋಗಗಳು ಹೆಚ್ಚಾಗಲಿದ್ದು, ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್. ಅನುರಾಧ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ ಒಂದು ಮಲೇರಿಯಾ ಹಾಗೂ ಆರು ಡೆಂಗಿ ಪ್ರಕರಣಗಳು ದಾಖಲಾಗಿವೆ ಎಂದರು.

ಮುಂಗಾರು ಪೂರ್ವ ಹಾಗೂ ನಂತರದ ಅವಧಿಯಲ್ಲಿ ಡೆಂಗಿ, ಚಿಕೂನ್ ಗುನ್ಯಾ, ಜಿಕಾ ಸೋಂಕು ಹರಡುವ ಈಡೀಸ್ ಜಾತಿಯ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಸಾಂಕ್ರಾಮಿಕ ರೋಗಗಳು ವೇಗವಾಗಿ ಹರಡುವ ಅಪಾಯವಿದೆ ಎಂದು ಹೇಳಿದರು.

ಹವಾಮಾನ ಬದಲಾವಣೆ, ತ್ವರಿತ ನಗರೀಕರಣ, ನೀರಿನ ಕೊರತೆ, ಅವ್ಯವಸ್ಥಿತ ಕಟ್ಟಡ ಕಾಮಗಾರಿ ಹಾಗೂ ಘನ ತ್ಯಾಜ್ಯದ ಅಸಮರ್ಪಕ ವಿಲೇವಾರಿಯಿಂದ ಸೊಳ್ಳೆಗಳ ಉತ್ಪತ್ತಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು.

ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ, ಮೆದುಳು ಜ್ವರ ಹಾಗೂ ಆನೆಕಾಲು ರೋಗಗಳ ನಿಯಂತ್ರಣಕ್ಕೆ ಸಂಬಂಧಪಟ್ಟ ಇಲಾಖೆಗಳ ಸಮನ್ವಯ ಅಗತ್ಯವಾಗಿದೆ. ಸಾರ್ವಜನಿಕರೂ ಸಹ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಕರೆ ನೀಡಿದರು.

ತೆರೆದ ನೀರಿನ ತೊಟ್ಟಿಗಳು, ಪ್ಲಾಸ್ಟಿಕ್ ಡ್ರಮ್ಗಳು, ಸಿಮೆಂಟ್ ತೊಟ್ಟಿಗಳು, ಏರ್ ಕೂಲರ್ಗಳು, ಮೇಲ್ಚಾವಣಿ ಇಲ್ಲದ ನೀರಿನ ಸಂಗ್ರಹ ತಾಣಗಳು ಸೇರಿದಂತೆ ಎಲ್ಲೆಲ್ಲಿ ನೀರು ನಿಂತಿರುತ್ತದೆಯೋ ಅಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತದೆ. ಆದ್ದರಿಂದ ಸಾರ್ವಜನಿಕರು ವಾರಕ್ಕೊಮ್ಮೆ ನೀರಿನ ತೊಟ್ಟಿಗಳು ಹಾಗೂ ಡ್ರಮ್ಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ನೀರಿನ ಸಂಗ್ರಹಣಾ ಪಾತ್ರೆಗಳಿಗೆ ಮುಚ್ಚಳ ಹಾಕಬೇಕು ಎಂದು ಸಲಹೆ ನೀಡಿದರು.

ಸ್ವಯಂ ರಕ್ಷಣೆಗೆ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳ ಬಳಕೆ ಮಾಡಬೇಕು. ಮನೆಗಳ ಕಿಟಕಿಗಳಿಗೆ ಮೆಶ್ ಅಳವಡಿಸಬೇಕು. ಮೈತುಂಬ ಬಟ್ಟೆ ಧರಿಸುವುದು ಹಾಗೂ ಹಗಲು ವೇಳೆಯಲ್ಲೂ ಸೊಳ್ಳೆ ಕಚ್ಚದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಒಡೆದ ಟೈರ್ಗಳು, ತೆಂಗಿನ ಚಿಪ್ಪುಗಳು, ಪ್ಲಾಸ್ಟಿಕ್ ಪಾತ್ರೆಗಳು, ಬಕೆಟ್ಗಳು, ಬಾಟಲ್ಗಳು, ಮಡಕೆಗಳು, ಹೂವಿನ ಕುಂಡಗಳ ತಟ್ಟೆಗಳು ಸೇರಿದಂತೆ ನೀರು ನಿಲ್ಲುವ ಎಲ್ಲ ವಸ್ತುಗಳನ್ನು ತೆರವುಗೊಳಿಸುವ ಮೂಲಕ ಸೊಳ್ಳೆಗಳ ಉತ್ಪತ್ತಿ ತಡೆಯಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಲಕ್ಕ ಕೃಷ್ಣ ರೆಡ್ಡಿ, ಆರೋಗ್ಯಾಧಿಕಾರಿ ಡಾ. ಹೇಮಾವತಿ, ಡಾ. ಕೋಮಲ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-15-78064472

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.