ಸೋಮವಾರ, ಜೂಲೈ 6, 2020
24 °C
ದೇವನಹಳ್ಳಿ: ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ

ದೇವನಹಳ್ಳಿ: ಆರೋಗ್ಯ ರಕ್ಷಣಾ ವ್ಯವಸ್ಥೆ ಕಲ್ಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ವಿದೇಶದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವಂತಹ ರಾಜ್ಯದ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸುವಾಗ, ಸೂಕ್ತ ಆರೋಗ್ಯ ಮತ್ತು ರಕ್ಷಣಾ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿದೇಶದಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಲ್ಪಿಸುವ ಸಂಬಂಧ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮೇ 11ರಿಂದ, ವಿದೇಶದಿಂದ ಆಗಮಿಸುವ ರಾಜ್ಯದ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಮೂರು ದರ್ಜೆಗಳಲ್ಲಿ ಹೋಟೆಲ್‌ಗಳನ್ನು ಗುರುತಿಸಲಾಗಿದೆ. ಪ್ರಯಾಣಿಕರು ತಮ್ಮ ಸ್ವಂತ ಖರ್ಚಿನಲ್ಲಿ ಸರ್ಕಾರ ನಿಗದಿಪಡಿಸಿರುವ ದರವನ್ನು ಭರಿಸಿ, ಇಚ್ಚಿಸುವ ಹೋಟೆಲ್‌ನಲ್ಲಿ 14 ದಿನಗಳ ಕ್ವಾರಂಟೈನ್ ವ್ಯವಸ್ಥೆಗೆ ಒಳಗಾಗಬಹುದು. ವಿಮಾನ ಪ್ರಯಾಣಕ್ಕೆ ಮುನ್ನ ಹಾಗೂ ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಯಬೇಕು’ ಎಂದು ತಿಳಿಸಿದರು.

‘ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಶಂಕೆ ಕಂಡುಬಂದಲ್ಲಿ, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಗೆ ಕಳುಹಿಸಿಕೊಡಲಾಗುವುದು. ವಿದೇಶದಿಂದ ಆಗಮಿಸುವ ಯಾವ ಒಬ್ಬ ಪ್ರಯಾಣಿಕ ಕ್ವಾರಂಟೈನ್ ವ್ಯವಸ್ಥೆಯಿಂದ ತಪ್ಪಿಸಿಕೊಳ್ಳದಂತೆ ಅಧಿಕಾರಿಗಳು ಬಹಳ ಎಚ್ಚರ ವಹಿಸಬೇಕು. ಹೋಟೆಲ್‌ಗಳಲ್ಲೂ ಸಹ ವೈದ್ಯಕೀಯ ಸಿಬ್ಬಂದಿ ಯನ್ನು ಪ್ರಯಾಣಿಕರ ಆರೋಗ್ಯ ಸೇವೆಗೆ ನಿಯೋಜಿಸಲಾಗುವುದು’ ಎಂದರು.

‘ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಯಾಣಿಕರ ಕ್ವಾರಂಟೈನ್ ವ್ಯವಸ್ಥೆ ಮಾಡಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಪ್ರಯಾಣಿಕರಿಗೆ ಮೊದಲ ಬೆಂಗಳೂರು ನಗರದಲ್ಲಿ ಗುರುತಿಸಿರುವ ಹೋಟೆಲ್ ಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು. ಪ್ರಯಾಣಿಕರ ಸಂಖ್ಯೆ ಹೆಚ್ಚಿದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರವಲಯದಲ್ಲಿ ಗುರುತಿಸಿರುವ ಹೋಟೆಲ್‌ಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್.ಶೋಭಾ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು