ಬುಧವಾರ, ಆಗಸ್ಟ್ 17, 2022
26 °C

ಅನುದಾನ ಬಳಕೆಗೆ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ‘ಪ್ರಸಕ್ತ ಸಾಲಿನ ಅನುದಾನವನ್ನು ಫೆ. 28ರೊಳಗೆ ಬಳಸಲು ಅಧಿಕಾರಿಗಳು ಮುಂದಾಗಬೇಕು’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಹಲವಾರು ಇಲಾಖೆಗಳಲ್ಲಿ ಕಾಮಗಾರಿಗಳು ಸ್ಥಗಿತಗೊಂಡಿವೆ. ನೇರವಾಗಿ ಭೇಟಿ ಮಾಡಿ ಸಮಸ್ಯೆ ಪರಿಹರಿಸಿಕೊಳ್ಳಬೇಕು. ವಿನಾಕಾರಣ ಕಾಮಗಾರಿಗಳು ವಿಳಂಬವಾಗಿ ಅನುದಾನ ವಾಪಸ್ ಹೋದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

2020-21ನೇ ಸಾಲಿನ ಆಯವ್ಯಯದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿರಿಸಿರುವ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅನುದಾನವು ಪೂರ್ಣ ಬಳಕೆಯಾಗದಿದ್ದರೆ ಜಿಲ್ಲಾ ಪಂಚಾಯಿತಿಗೆ ಸೂಕ್ತ ಕಾರಣ ನೀಡಿ ಲಿಖಿತ ಪತ್ರ ಸಲ್ಲಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ. ಕರಿಯಪ್ಪ ಮಾತನಾಡಿ, ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಇಲಾಖೆಗಳಿಗೆ ಸಂದಾಯವಾಗಿರುವ ಅನುದಾನವನ್ನು ಸಕಾಲದಲ್ಲಿ ಖರ್ಚು ಮಾಡುವ ಮೂಲಕ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಕ್ಷರದಾಸೋಹ ಸೇರಿದಂತೆ ವಿವಿಧ ಇಲಾಖೆಗಳು ಹೆಚ್ಚು ಅನುದಾನ ಉಳಿಸಿಕೊಂಡಿವೆ. ಶೀಘ್ರವೇ ಅನುಮೋದನೆ ಪಡೆದು ಅನುದಾನದಡಿ ಪೂರ್ಣಗೊಳ್ಳಬೇಕಿರುವ ಕಾಮಗಾರಿಗಳನ್ನು ಕಾರ್ಯಗತಗೊಳಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಡಾ.ರಮೇಶ್ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು