ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯರಲ್ಲಿ ಮೂಡಿದ ಖುಷಿ

ದೊಡ್ಡಬಳ್ಳಾಪುರ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಘೋಷಣೆ
Last Updated 4 ಡಿಸೆಂಬರ್ 2020, 8:10 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣ ದಿನಾಂಕ ಪ್ರಕಟವಾದ ಎರಡು ದಿನಗಳ ಬಳಿಕ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ‌ ಮೇಲ್ದರ್ಜೆಗೇರಿಸುವ ಮೂಲಕ ಸಂಪುಟ ಸಭೆ ತೀರ್ಮಾನಿಸಿದೆ. ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಅಧಿನ ಕಾರ್ಯದರ್ಶಿ ಎ.ವಿಜಯಕುಮಾರ್ ವಿಶೇಷ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ.

ಚುನಾವಣ ದಿನಾಂಕ ಘೋಷಣೆಯಾಗಿ ಚುನಾವಣೆಗೆ ಎಲ್ಲ ಸಿದ್ಧತೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವುದೋ, ಇಲ್ಲವೋ ಎನ್ನುವ ಗೊಂದಲ ಸ್ಥಳೀಯರನ್ನು ಕಾಡುತ್ತಿದೆ. ಮತ್ತೊಂದೆಡೆ ಚುನಾವಣೆ ಆಯೋಗದ ಸೂಚನೆಯಂತೆ ಚುನಾವಣೆ ಅಧಿಕಾರಿಗಳು ಚುನಾವಣೆಗೆ ಅಗತ್ಯ ಪ್ರಕ್ರಿಯೆ ಆರಂಭಿಸಿದ್ದಾರೆ.

ಚುನಾವಣೆ ಆಯೋಗಕ್ಕೆ ಡಿಸಿ ಪತ್ರ: ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತಂತೆ ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗೆ ಅವಕಾಶ ನೀಡಿರುವುದರಿಂದ ಈ ಎಲ್ಲಾ ಪ್ರಕ್ರಿಯೆ ಮುಕ್ತಾಯವಾಗಲು ಸಮಯಾವಕಾಶ ಬೇಕಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದ್ದಾರೆ.

ಅಧಿಸೂಚನೆ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಕುರಿತಂತೆ ಸ್ಪಷ್ಟನೆ ಕೋರಿ ಚುನಾವಣ ಆಯೋಗಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಮೂರು ದಿನಗಳ ಒಳಗೆ ಸ್ಪಷ್ಟ ಚಿತ್ರಣ ದೊರಕಲಿದೆ ಎಂದರು.

ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವಿಶೇಷ: ತಾಲ್ಲೂಕಿನ 29 ಗ್ರಾಮ ಪಂಚಾಯಿತಿಗಳ ಪೈಕಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯಿತಿ ಬಾಶೆಟ್ಟಿಹಳ್ಳಿಯಲ್ಲಿ 47 ಜನ ಸದಸ್ಯರು ಇದ್ದಾರೆ. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶವನ್ನು ಸಹ ಹೊಂದಿರುವುದರಿಂದ ವಾಣಿಜ್ಯ ಚಟುವಟಿಕೆಗಳು ಹೆಚ್ಚು. ಹೀಗಾಗಿ ವಾರ್ಷಿಕ ಆದಾಯವು ಹೆಚ್ಚಾಗಿದ್ದು, ಗ್ರಾಮ ಪಂಚಾಯಿತಿ ಬಜೆಟ್‌ ಗಾತ್ರ ₹5.30 ಕೋಟಿವರೆಗೆ ಇದೆ. ಒಳಚರಂಡಿ ಕಾಮಗಾರಿಯು ಸಹ ಪ್ರಗತಿಯಲ್ಲಿದೆ.

ಮೀಸಲು ವಿವರ: ಪರಿಶಿಷ್ಟ ಜಾತಿ -54, ಪರಿಶಿಷ್ಟ ಜಾತಿ ಮಹಿಳೆ- 69, ಪರಿಶಿಷ್ಟ ಪಂಗಡ - 9, ಪರಿಶಿಷ್ಟ ಪಂಗಡ ಮಹಿಳೆ - 28, ಹಿಂದುಳಿದ ವರ್ಗ 'ಎ' - 23, ಹಿಂದುಳಿದ ವರ್ಗ 'ಎ' ಮಹಿಳೆ - 40, ಹಿಂದುಳಿದ ವರ್ಗ 'ಬಿ' - 13,ಹಿಂದುಳಿದ ವರ್ಗ 'ಬಿ' ಮಹಿಳೆ - 4,ಸಾಮಾನ್ಯ 142, ಸಾಮಾನ್ಯ ಮಹಿಳೆ 108.

ಮತದಾರರು: 76,437 ಪುರುಷರು,75,232 ಮಹಿಳೆಯರು ಸೇರಿ ಒಟ್ಟು 1,51,669 ಮತದಾರರು ಈ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ. ತಾಲ್ಲೂಕಿನಲ್ಲಿ 258 ಮತಗಟ್ಟೆ ಸ್ಥಾಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT