ಗುರುವಾರ , ಮಾರ್ಚ್ 30, 2023
32 °C

ದೊಡ್ಡಬಳ್ಳಾಪುರ: ದೇಗುಲ ಪ್ರತಿಷ್ಠಾಪನಾ ಮಹೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ತಾಲ್ಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನ. 7ರಂದು ಮೈಲಾರಲಿಂಗೇಶ್ವರ ಸ್ವಾಮಿ, ಗಂಗಮಾಳಮ್ಮ ಮತ್ತು ತುಪ್ಪದ ಮಾಳಮ್ಮ, ಶಿವಲಿಂಗ, ಗಣಪತಿ ಹಾಗೂ ನಂದಿ ದೇವರ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ.

ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಕಾಗಿನೆಲೆಯ ಕನಕಗುರು ಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಕಪಿಲಮುನಿ ಗುರುಪೀಠದ ಗುರುವೆಂಕಪ್ಪಯ್ಯ ಒಡೆಯರ್‌ ನೇತೃತ್ವ‌ವಹಿಸಲಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೇವಾಲಯ ಉದ್ಘಾಟಿಸಲಿದ್ದಾರೆ. ಶಾಸಕ ಟಿ. ವೆಂಕಟರಮಣಯ್ಯ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌, ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್, ಮಾಜಿ ಸಚಿವ ಆರ್‌. ಶಂಕರ್‌ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.