ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯೋತ್ಸವ ಪ್ರಶಸ್ತಿ ವಿತರಣೆ ಮುಂದೂಡಿಕೆಗೆ ಖಂಡನೆ

Last Updated 2 ನವೆಂಬರ್ 2018, 13:25 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಾಡು, ನುಡಿಗಾಗಿ ಶ್ರಮಿಸಿದವರನ್ನು ಗೌರವಿಸಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ, ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಸನ್ಮಾನಿಸುವ ಕಾರ್ಯಕ್ರಮ ಚುನಾವಣೆಯ ನೆಪ ಹೇಳಿ ಮುಂದೂಡಿರುವುದು ಸಮಂಜಸವಲ್ಲ ಎಂದು ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಹೇಳಿದರು.

ನಗರದ ಡಾ.ರಾಜ್ ಕುಮಾರ್ ಕಲಾ ಭವನದಲ್ಲಿ ಗುರುವಾರ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ನಡೆಯುತ್ತಿರುವ ಹತ್ತು ದಿನಗಳ ‘ಕನ್ನಡಿಗರ ಹಬ್ಬ’ ಉದ್ಘಾಟಿಸಿ ಮಾತನಾಡಿದರು.

ಕನ್ನಡಪರ, ರೈತಪರ ಹಾಗೂ ದಲಿತಪರ ಸಂಘಟನೆಗಳು ಈ ನಾಡಿನ ಸಮಸ್ಯೆಗಳಿಗೆ ಹೋರಾಟ ನಡೆಸುವ ಮೂಲಕ ತಮ್ಮದೇ ಆದ ಕೊಡುಗೆ ನೀಡಿವೆ. ರಾಜಕೀಯ ಏನೇ ಇದ್ದರೂ ಭಾಷೆಯ ವಿಚಾರ ಬಂದಾಗ ಪ್ರತಿಯೊಬ್ಬ ಕನ್ನಡಿಗರೂ ಸಂಘಟಿತರಾಗುವ ಅಗತ್ಯವಿದೆ. ಆದರೆ ವಿಧಾನ ಸಭೆಗಳಲ್ಲಿಯೂ ಕನ್ನಡ ಭಾಷೆಯನ್ನು ಕಡೆಗಣಿಸಲಾಗುತ್ತಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಭುವನೇಶ್ವರಿ ಕನ್ನಡ ಸಂಘದ ಸಲಹೆಗಾರ, ನಗರಸಭೆ ಅಧ್ಯಕ್ಷ ಟಿ.ಎನ್.ಪ್ರಭುದೇವ್, 50 ವರ್ಷಗಳಿಂದ ಸಂಘ ಹಲವಾರು ಕನ್ನಡಪರ ಕಾರ್ಯಕ್ರಮಳನ್ನು ರೂಪಿಸುವ ಮೂಲಕ ಜನಮನ್ನಣೆ ಗಳಿಸಿದೆ. ನ.10ರವರೆಗೆ ಪ್ರತಿದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ, ಯಕ್ಷಗಾನ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯ ಅಧ್ಯಕ್ಷತೆ ವಹಿಸಿದ್ದರು.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮೀ ನಟರಾಜ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಪ್ರಮೀಳಾಮಹದೇವ್,ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಬಿ.ಜಿ.ಅಮರ್‍ನಾಥ್, ತಾಲ್ಲೂಕು ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಉಪನ್ಯಾಸಕ ಕೆ.ಆರ್.ರವಿಕಿರಣ್, ನಗರಸಭಾ ಸದಸ್ಯೆ ಭಾಗ್ಯ ಚೌಡರಾಜ್, ದೇವಾಂಗ ಮಂಡಲಿ ಮಾಜಿ ಅಧ್ಯಕ್ಷ ವಿ.ತಿಮ್ಮಶೆಟ್ಟಪ್ಪ, ಸಾಹಿತಿ ಮ.ಚಿ.ಕೃಷ್ಣ, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಪಿ.ನವೀನ್, ಗೌರವ ಅಧ್ಯಕ್ಷ ಪುಟ್ಟಪ್ಪ ಇದ್ದರು. ಬಾಶೆಟ್ಟಿಹಳ್ಳಿಯ ಮಂಜುನಾಥ್ ಕಲಾ ತಂಡದಿಂದ ಕನ್ನಡ ಗೀತೆಗಳಿಗೆ ನೃತ್ಯ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT