ಶನಿವಾರ, ಜುಲೈ 31, 2021
28 °C

ಸಚಿವ ಪ್ರಭು ಚವಾಣ್ ರಾಜೀನಾಮೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಕಲಿ ದಾಖಲೆ ಸಲ್ಲಿಸಿ ಜಾತಿ ಪ್ರಮಾಣಪತ್ರ ಪಡೆದ ಆರೋಪ ಹೊಂದಿರುವ ಪಶುಸಂಗೋಪನೆ ಸಚಿವ ಪ್ರಭು ಚವಾಣ್‌ ರಾಜೀನಾಮೆ ನೀಡಬೇಕು ಎಂದು ಭಾರತ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ.ಮುನಿಯಪ್ಪ ಒತ್ತಾಯಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರಭು ಚವಾಣ್‌ ಪ್ರತಿನಿಧಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇದು ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪ‍ಡಿಸಿದ್ದಾರೆ.  

ಮಹಾರಾಷ್ಟ್ರ ಮೂಲದ ಉದಗೀರ್ ತಾಲ್ಲೂಕಿನ ತೊಂಡಚೀರ್ ಗ್ರಾಮದ ನಿವಾಸಿಯಾಗಿರುವ ಅವರು ಲಂಬಾಣಿ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ ಎನ್ನುವುದು ಸಾಬೀತಾಗಿದ್ದರೂ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಮೂರು ಬಾರಿ ಶಾಸಕರಾಗಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಟ್ಟು ಅವರ ದಾಖಲೆಗಳ ವಿಚಾರಣೆಯನ್ನು ಸಿಬಿಐ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು