ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಹೇಳನಕಾರಿ ಹೇಳಿಕೆ: ಕ್ಷಮೆ ಕೋರಲು ಒತ್ತಾಯ

Last Updated 10 ಜುಲೈ 2019, 14:11 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಸಾಹಿತಿಗಳು, ಕಲಾವಿದರು, ಕನ್ನಡಪರ ಸಂಘ ಸಂಸ್ಥೆಗಳನ್ನು ಕಳ್ಳರು, ಸುಳ್ಳರು ಎಂದು ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಕ್ಷಮೆ ಯಾಚಿಸಬೇಕು’ ಎಂದು ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟ ರಾಜ್ಯ ಘಟಕದ ಅಧ್ಯಕ್ಷ ನಾಗರಾಜ್‌ ಒತ್ತಾಯಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ಶತಮಾನಗಳಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿದಿರುವುದು ಲಕ್ಷಾಂತರ ಕಲಾವಿದರು ಮತ್ತು ಪ್ರಗತಿಪರ ಕನ್ನಡ ಸಂಘಟನೆಗಳ ಪರಿಶ್ರಮದಿಂದಲೇ ಹೊರತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಂದಲ್ಲ. ಇಲಾಖೆ ನೀಡುತ್ತಿರುವುದು ಪ್ರೋತ್ಸಾಹ ಧನವಷ್ಟೇ. ಇಲಾಖೆ ಅನುಸರಿಸುತ್ತಿರುವ ನೀತಿ ನಿಯಮಗಳು, ಕಲಾವಿದರ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯ ಧೋರಣೆ ಕಲಾವಿದರನ್ನು ಮೂಲೆಗುಂಪು ಮಾಡುತ್ತಿವೆ. ಇಂತಹ ವಾತಾವರಣ ಸಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಲಾವಿದ ರಾಮಚಂದ್ರ ಮಾತನಾಡಿ, ‘ಸಚಿವರು ತೆಗೆದುಕೊಂಡಿರುವ ನಿರ್ಧಾರ ಸಾಂಸ್ಕೃತಿಕ ಕ್ಷೇತ್ರವನ್ನು ಹಾಳು ಮಾಡುವಂತಿದೆ. ಪರಂಪರೆಯ ಕಲಾ ಸಂಪತ್ತು ಉಳಿಯಬೇಕಾದರೆ ಇಲಾಖೆ ನೀಡಿರುವ ಮಾರ್ಗಸೂಚಿಯನ್ನು ಸರಳಗೊಳಿಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆ ನಡೆಸಿದ ಕಲಾವಿದರು ಹೆಚ್ಚುವರಿ ಜಿಲ್ಲಾಧಿಕಾರಿ ರಮ್ಯ ಅವರಿಗೆ ಮನವಿ ಸಲ್ಲಿಸಿದರು.ಕಲಾವಿದರಾದ ನಾಗೇಶ್‌, ರಾಜಶೇಖರ್‌, ರಂಗನಾಥ್‌, ಶಿವಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT