ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸಂಸದನಾಗಿದ್ದರೂ ಅನುದಾನಕ್ಕಾಗಿ ಪರದಾಟ: ಬಚ್ಚೇಗೌಡ ವಾಗ್ದಾಳಿ

Published 31 ಮಾರ್ಚ್ 2024, 20:06 IST
Last Updated 31 ಮಾರ್ಚ್ 2024, 20:06 IST
ಅಕ್ಷರ ಗಾತ್ರ

ವಿಜಯಪುರ (ದೇವನಹಳ್ಳಿ): ‘ಬಿಜೆಪಿ ಸಂಸದನಾಗಿದ್ದರೂ ಕೇಂದ್ರದಿಂದ ಕ್ಷೇತ್ರಕ್ಕೆ ಅನುದಾನ ತರಲು ಐದು ವರ್ಷದಲ್ಲಿ ತುಂಬಾ ಕಷ್ಟಪಡಬೇಕಾಯಿತು. ಸಾಕಷ್ಟು ಪರಿಶ್ರಮದಿಂದ ಅನುದಾನ ತಂದು ಕ್ಷೇತ್ರದಲ್ಲಿ ಕೆಲಸಗಳು ಮಾಡಬೇಕಾಯಿತು’ ಎಂದು ಹಿರಿಯ ರಾಜಕಾರಣಿ ಬಿ.ಎನ್.ಬಚ್ಚೇಗೌಡ ಹೇಳಿದ್ದಾರೆ.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಯುವಕರ ಸ್ಥಿತಿ ಏನಾಗಲಿದೆ ಎನ್ನವ ಆತಂಕ ಕಾಡುತ್ತಿದೆ. 62 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದರೆ 70 ಸಾವಿರ ಅರ್ಜಿ ಬರುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.

‘ನಾನು ರಾಜಕೀಯದಿಂದ ನಿವೃತ್ತಿ ಪಡೆದಿದ್ದೇನೆ. ಮುಂದಿನ ದಿನಗಳಲ್ಲಿ ಯಾವ ಪಕ್ಷದೊಂದಿಗೂ ಕೆಲಸ ಮಾಡುವುದಿಲ್ಲ. ನನ್ನನ್ನು ಯಾವ ಪಕ್ಷದ ಮುಖಂಡರೂ ಸಂಪರ್ಕ ಮಾಡಿಲ್ಲ. ನಾನು ಯಾರ ಪರವಾಗಿಯೂ ಕೆಲಸ ಮಾಡಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT